ರಾಜ್ಯದಲ್ಲಿ ಮುಂದುವರಿದ ಮಳೆ: ಕರಾವಳಿ, ಮಲೆನಾಡು ಜಿಲ್ಲೆಗಳ ಶಾಲಾ ಕಾಲೇಜಿಗೆ ನಾಳೆಯೂ ರಜೆ

ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಮಡಿಕೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ  ಚಿಕ್ಕಮಗಳೂರು, ಮಡಿಕೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಮಂಗಳವಾರ ಸಹ ರಜೆ ಘೊಷಣೆ ಮಾಡಲಾಗಿದೆ.
ಚಿಕ್ಕಮಗಳೂರುಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು ನದಿಗಳು ತುಂಬಿ ಹರಿದಿದೆ. ಕೊಡಗು: ಜಿಲ್ಲೆಯ ಭಾಗಮಂಡಲ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತವಾಗಿದ್ದು, ಭಾಗಮಂಡಲ- ನಾಪೋಕ್ಲು ರಸ್ತೆ ಸಂಪರ್ಕವಿಲ್ಲದಂತಾಗಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಕಾವೇರಿ, ಕನ್ನಿಕೆ ಹಾಗೂ ಸುಜೋತಿ ನದಿಗಳು ಮೈದುಂಬಿ ಹರಿಯುತ್ತಿವೆ. ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿ 375 ರಲ್ಲಿ ಗುಡ್ಡ ಕುಸಿದಿದ್ದು ತೆರವು ಕಾರ್ಯಾಚರಣೆ ನಡೆದಿದೆ.
ಮಂಗಳೂರಿನಲ್ಲಿ ಸಹ ಸಂಜೆಯ ಬಳಿಕ ಬಿರುಗಾಳಿ ಸಹಿತ ಮಳೆ ಬೀಳುತ್ತಿದೆ.ಮಳೆಯೊಂದಾಗಿ ವಾಹನ ಸಂಚಾರ ಸಂಪೂರ್ಣ ಸ್ತಬ್ದವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಸಹ ಭಾರೀ ಮಳೆಯಾಗಿದೆ. ಕರಾವಳಿ ಬಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದು  ಸಮುದ್ರದಲ್ಲಿ 10-12  ಅಡಿ ಎತ್ತರದ ಅಲೆಗಳು ಏಳುತ್ತಿದೆ.
ಹಾಸನ. ಸಕಲೇಶಪುರ ತಾಲೂಕಿನಲ್ಲಿ ಸಹ ಭಾರೀ ಮಳೆಯಾಗುತ್ತಿದ್ದು ತಾಲೂಕು ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಸಾರಲಾಗಿದೆ.
ಶಿವಮೊಗ್ಗದ ತೀರ್ಥಹಳ್ಳಿ, ಸಾಗರ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ತುಂಗಾ ಜಲಾಶಯದಿಂದ 54 ಸಾವಿರ ಕ್ಯೂಸೆಕ್ಸ್ ಹಾಗೂ ಭದ್ರಾ ಜಲಾಶಯದಿಂದ 16 ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದೆ. ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು ಕೋರ್ಪಲಯ್ಯನ ಛತ್ರ್ದ ಬಳಿ ಮಂಟಪ ಮುಳುಗಡೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com