4 ವರ್ಷಗಳ ಬಳಿಕ ಲಿಂಗನಮಕ್ಕಿ ಗೇಟ್ ಓಪನ್, ಕೆಆರ್ ಎಸ್ ನಿಂದಲೂ ಅಪಾರ ಪ್ರಮಾಣದ ನೀರು ಹೊರಕ್ಕೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವ ಪರಿಣಾಮ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನಾಲ್ಕು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಲಿಂಗನಮಕ್ಕಿ ಜಲಾಶಯದ ಗೇಟ್ ಗಳನ್ನು ತೆರೆದು ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಕೆಆರ್ ಎಸ್ ಜಲಾಶಯ
ಕೆಆರ್ ಎಸ್ ಜಲಾಶಯ
ಬೆಂಗಳೂರು: ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವ ಪರಿಣಾಮ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನಾಲ್ಕು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಲಿಂಗನಮಕ್ಕಿ ಜಲಾಶಯದ ಗೇಟ್ ಗಳನ್ನು ತೆರೆದು ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಪ್ರಮುಖವಾಗಿ ಮಲೆನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಪರಿಣಾಮ ಕಾವೇರಿ, ಕಪಿಲ ನದಿಗಳು ತುಂಬಿ ಹರಿಯುತ್ತಿವೆ. ಶ್ರೀರಂಗ ಪಟ್ಟಣ, ನಿಮಿಷಾಂಬ ದೇಗುಲ, ನಂಜನಗೂಡಿನಲ್ಲೂ ನದಿ ಉಕ್ಕಿ ಹರಿದಿದೆ. ಇನ್ನು ನಾಲ್ಕು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಲಿಂಗನಮಕ್ಕಿ ಜಲಾಶಯದಿಂದ ಗೇಟ್ ತೆರೆದು ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಕಪಿಲ ಮತ್ತು ಕಾವೇರಿ ನದಿ ಪ್ರವಾಹದಿಂದಾಗಿ ಅಪಾರ ಪ್ರಮಾಣದ ನೀರು ಡ್ಯಾಂಗಳಿಗೆ ಹರಿದು ಬರುತ್ತಿದ್ದು,  94 ಸಾವಿರ ಕ್ಯೂಸೆಕ್ಸ್ ನೀರನ್ನು ಡ್ಯಾಂ ನಿಂದ ಹೊರಗೆ ಬಿಡಲಾಗಿದೆ. ಸಾಗರ ತಾಲೂಕಿನ ಕರಗಾಲ್ ಗ್ರಾಮದಲ್ಲಿರುವ ಲಿಂಗನಮಕ್ಕಿ ಜಲಾಶಯದಿಂದ ನೀರು ಹರಿಯ ಬಿಡಲಾಗಿದ್ದು, ನಾಲ್ಕು ವರ್ಷಗಳಲ್ಲಿ ಇದೇ ಮೊದಲು. 1964ರಿಂದ ಈ ವರೆಗೂ ಡ್ಯಾಂನ ಗೇಟ್ ಗಳನ್ನು ಒಟ್ಟು 14 ಬಾರಿ ತೆರೆದು ನೀರು ಬಿಡಲಾಗಿದೆ.
13 ವರ್ಷಗಳ ಬಳಿಕ ಕೆಆರ್ ಎಸ್ ನ 60 ಗೇಟ್ ಗಳನ್ನು ತೆರೆದು ನೀರು ಹೊರಕ್ಕೆ
ಇತ್ತ ಕೃಷ್ಣ ರಾಜ ಸಾಗರ ಅಣೆಕಟ್ಟಿನಿಂದಲೂ ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗಿದೆ. ಕಳೆದ 13 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಡ್ಯಾಂನ 60 ಗೇಟ್ ಗಳನ್ನು ತೆರೆದು ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಸುಮಾರು 1 ಲಕ್ಷ ಕ್ಯೂಸೆಕ್ಸ್ ಗೂ ಅಧಿಕ ಪ್ರಮಾಣದ ನೀರನ್ನು ಜಲಾಶಯದಿಂದ ಹರಿಯ ಬಿಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com