ಎಬಿ ವಾಜಪೇಯಿ ನಿಧನ: ರಾಜ್ಯದ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಇಂದು ರಜೆ

ಭಾರತ ರತ್ನ, ಅಜಾತ ಶತ್ರು, ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನರಾದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದ ಇಂದು ರಾಜ್ಯದ ಎಲ್ಲ...
ಎಬಿ ವಾಜಪೇಯಿ
ಎಬಿ ವಾಜಪೇಯಿ
ಬೆಂಗಳೂರು: ಭಾರತ ರತ್ನ, ಅಜಾತ ಶತ್ರು, ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನರಾದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದ ಇಂದು ರಾಜ್ಯದ ಎಲ್ಲ ಶಾಲಾ-ಕಾಲೇಜುಗಳು, ಬ್ಯಾಂಕ್ ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. 
ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದ್ದು ನಮ್ಮನ್ನು ಅಗಲಿದ ನಾಯಕನಿಗೆ ಗೌರವಾರ್ಥ ಸರ್ಕಾರಿ ಕಚೇರಿಗಳ ಮೇಲೆ ಅರ್ಧಕ್ಕೆ ರಾಷ್ಟ್ರಧ್ವಜವನ್ನು ಇಳಿಸಿ ಹಾರಿಸುವಂತೆ ಸರ್ಕಾರ ಸೂಚಿಸಿದೆ.
ಕೇಂದ್ರ ಸರ್ಕಾರದ ವತಿಯಿಂದ 7 ದಿನಗಳ ಕಾಲ ಶೋಕಾಚರಣೆ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರವು ಸಹ ಸರ್ಕಾರಿ ಅಂಗ ಸಂಸ್ಥೆಗಳಿಗೆ ಅರ್ಧ ದಿನ ರಜೆ ಘೋಷಿಸಿದೆ. 
ಇನ್ನು ಈಗಾಗಲೇ ಉತ್ತರಪ್ರದೇಶ, ಉತ್ತರಖಂಡ್, ಮಧ್ಯಪ್ರದೇಶ, ಜಾರ್ಖಂಡ್ ಹಾಗೂ ದೆಹಲಿಯಲ್ಲಿ ಆಯಾ ರಾಜ್ಯ ಸರ್ಕಾರಗಳು ರಜೆ ಘೋಷಿಸಿದೆ. 
ನಾಳೆ ಬೆಳಗ್ಗೆ 10 ಗಂಟೆಗೆ ಬಿಜಿಪಿ ಕಚೇರಿಯಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವಾಜಪೇಯಿ ಅವರ ಪಾರ್ಥಿವ ಶರೀರವನ್ನು ಇಡಲಾಗುವುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com