ಕರ್ನಾಟಕದಲ್ಲೂ ಅತಿವೃಷ್ಟಿ, ರಾಜ್ಯದ ಅರ್ಧ ಭಾಗದಲ್ಲಿ ಪ್ರವಾಹ ಪರಿಸ್ಥಿತಿ!

ಕೇರಳ ಮತ್ತು ಉತ್ತರ ಭಾರತದಲ್ಲಿ ಭಾರಿ ಸದ್ದು ಮಾಡುತ್ತಿರುವ ಭಾರಿ ಮಳೆ ಇದೀಗ ಕರ್ನಾಟಕದಲ್ಲೂ ಮುಂದುವರೆದಿದ್ದು, ಪರಿಣಾಮ ರಾಜ್ಯ ಸುಮಾರು ಅರ್ಧದಷ್ಟು ಭಾಗದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಕರ್ನಾಟಕದಲ್ಲೂ ಪ್ರವಾಹ ಪರಿಸ್ಥಿತಿ
ಕರ್ನಾಟಕದಲ್ಲೂ ಪ್ರವಾಹ ಪರಿಸ್ಥಿತಿ
Updated on
ಬೆಂಗಳೂರು: ಕೇರಳ ಮತ್ತು ಉತ್ತರ ಭಾರತದಲ್ಲಿ ಭಾರಿ ಸದ್ದು ಮಾಡುತ್ತಿರುವ ಭಾರಿ ಮಳೆ ಇದೀಗ ಕರ್ನಾಟಕದಲ್ಲೂ ಮುಂದುವರೆದಿದ್ದು, ಪರಿಣಾಮ ರಾಜ್ಯ ಸುಮಾರು ಅರ್ಧದಷ್ಟು ಭಾಗದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಲ್ಲಿನ ಜಲಾಶಯಗಳಿಗೆ ಭಾರಿ ಪ್ರಮಾಣದ ನೀರು ಹರಿಯುತ್ತಿದೆ. ಹೀಗಾಗಿ ಅಲ್ಲಿನ ಸರ್ಕಾರ ತನ್ನ ಜಲಾಶಯಗಳಿಂದ ನೀರು ಬಿಡುಗಡೆ ಮಾಡುತ್ತಿರುವ ಪರಿಣಾಮ ಗಡಿ ಭಾಗದ ಜಿಲ್ಲೆಗಳಲ್ಲಿ ಇದೀಗ ನೆರೆ ಪರಿಸ್ಥಿತಿ ತಲೆದೋರಿದೆ. ಅಲ್ಲದೆ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಭಾರಿ ಮಳೆಯಾಗುತ್ತಿದ್ದು, ಪರಿಣಾಮ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಹಾವೇರಿ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ರಾಯಚೂರು ಮತ್ತು ಬಾಗಲಕೋಟೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.
ಪ್ರಮುಖವಾಗಿ ಕಾವೇರಿ, ಲಕ್ಷ್ಮಣತೀರ್ಥ, ಶರಾವತಿ, ರಾಮತೀರ್ಥ, ಕುಮಾರಧಾರಾ ಮತ್ತು ತುಂಗಭದ್ರಾ ನದಿಗಳು ತುಂಬಿ ಹರಿಯುತ್ತಿದ್ದು, ಸಾವಿರಾರು ಹೆಕ್ಟೇರ್ ಬೆಳೆ ನೀರುಪಾಲಾಗಿದೆ. ಮಳೆ ಮತ್ತು ಪ್ರವಾಹದಿಂದಾದಿ ಕೊಡಗು ತತ್ತರಿಸಿದ್ದು, ರಸ್ತೆ-ಸೇತುವೆಗಳು ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿವೆ. ಕೆಲವೆಡೆ ಭೂಕುಸಿತವೂ ಉಂಟಾಗಿದೆ. ಸೋಮವಾರಪೇಟೆ- ಸಕಲೇಶಪುರ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಶಿರಾಡಿ ಘಾಟ್​ನಲ್ಲಿ ಮುಂದಿನ 15 ದಿನ ಸಂಚಾರ ನಿಷೇಧಿಸಲಾಗಿದೆ. ಕುಶಾಲನಗರದಲ್ಲಿ ಪ್ರವಾಹ ಸ್ಥಿತಿ ತಲೆದೋರಿದ್ದು ಬಹುತೇಕ ಮನೆಗಳು ಜಲಾವೃತವಾಗಿವೆ.
ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿದ್ದು ಜಲಾಶಯದಲ್ಲಿ 33 ಕ್ರಸ್ಟ್​ಗೇಟ್​ಗಳ ಮೂಲಕ ಎರಡು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿದ್ದರಿಂದ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಹಂಪಿ ಪುರಂದರ ಮಂಟಪ, ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯ ಮಂಟಪಗಳು ನದಿಯಲ್ಲಿ ಮುಳುಗಿವೆ.  ಮಂಡ್ಯ ಜಿಲ್ಲೆಯಲ್ಲಿ ಮಳೆಯಾಗದಿದ್ದರೂ ಕನ್ನಂಬಾಡಿ ಕಟ್ಟೆಯಿಂದ ಕಾವೇರಿ ನದಿಗೆ 1,25,000 ಕ್ಯೂಸೆಕ್ ನೀರು ಬಿಟ್ಟಿರುವ ಕಾರಣದಿಂದ ನದಿಪಾತ್ರದ ಬಹುತೇಕ ಪ್ರವಾಸಿ ತಾಣಗಳು ಜಲಾವೃತವಾಗಿವೆ. ಶ್ರೀರಂಗಪಟ್ಟಣ ಹಾಗೂ ಮಳವಳ್ಳಿ ತಾಲೂಕಿನ ಬಹುತೇಕ ಪ್ರವಾಸಿ ಕೇಂದ್ರಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಹೆಚ್ಚಾದ್ದರಿಂದ 33 ಕ್ರಸ್ಟ್ ಗೇಟ್​ಗಳಿಂದ ಬುಧವಾರ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿದ್ದರಿಂದ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಹಂಪಿ ಪುರಂದರ ಮಂಟಪ, ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯ ಮಂಟಪಗಳು ಮುಳುಗಿವೆ. ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚಿನ ನೀರು ಹರಿಯುತ್ತಿರುವುದರಿಂದ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಬಳಿಯ ಸ್ನಾನಘಟ್ಟ ಬುಧವಾರ ಮುಳುಗಡೆಯಾಗಿದೆ. ಭಕ್ತರು ನದಿಯಲ್ಲಿ ಇಳಿಯದಂತೆ ಶ್ರೀಮಠದ ಸಿಬ್ಬಂದಿ ಭಕ್ತರಿಗೆ ಸೂಚನೆ ನೀಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com