ಪ್ರವಾಹ ಪೀಡಿತ ಮೈಸೂರು, ಕೊಡಗು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ
ಪ್ರವಾಹದ ಹೊಡೆತಕ್ಕೆ ಸಿಲುಕಿ ಅಕ್ಷರಶ: ನಲುಗಿ ಹೋಗಿರುವ ಕೊಡಗು ಹಾಗೂ ಮೈಸೂರು ಜಿಲ್ಲೆಯ ವಿವಿಧೆಡೆಗಳಲ್ಲಿ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ ನಡೆಸಿದರು.
ಮೈಸೂರು:ಪ್ರವಾಹದ ಹೊಡೆತಕ್ಕೆ ಸಿಲುಕಿ ಅಕ್ಷರಶ: ನಲುಗಿ ಹೋಗಿರುವ ಕೊಡಗು ಹಾಗೂ ಮೈಸೂರು ಜಿಲ್ಲೆಯ ವಿವಿಧೆಡೆಗಳಲ್ಲಿ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ ನಡೆಸಿದರು.
ಬೆಂಗಳೂರಿನಲ್ಲಿ ಅತಿವೃಷ್ಟಿ ಪೀಡಿತ ಪ್ರದೇಶಗಳ ಪರಿಸ್ಥಿತಿ ವಿಮರ್ಶನಾ ಸಭೆಯ ನಂತರ ಮೈಸೂರು ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಮುಖ್ಯಮಂತ್ರಿ, ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸಿದರು. ಮಳೆಯಿಂದ ಹಾಳಾದ ಬೆಳೆನಷ್ಟ ವಸ್ತುಸ್ಥಿತಿಯನ್ನು ಅರಿತರು.
ಮನೆಗಳನ್ನು ಕಳೆದುಕೊಂಡ ಅರ್ಹ ಫಲಾನುಭವಿಗಳನ್ನು ಗುರುತಿಸಿ ತಕ್ಷಣವೇ 2 ಲಕ್ಷ ರೂ.ಗಳವರೆಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಇದೇ ವೇಳೆ ತಿಳಿಸಿದರು.
Donations for flood relief can be made by cheque or DD drawn in favour of