ಪ್ರವಾಹ ಭೀತಿ: ರಾಜ್ಯದ ಖ್ಯಾತ ರಂಗನತಿಟ್ಟು ಪಕ್ಷಿಧಾಮ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಕಾವೇರಿ ಕಣಿವೆಯಲ್ಲಿ ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ರಾಜ್ಯದ ಖ್ಯಾತ ಪ್ರವಾಸಿ ತಾಣ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿದರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ರಂಗನತಿಟ್ಟು ಪಕ್ಷಿಧಾಮ
ರಂಗನತಿಟ್ಟು ಪಕ್ಷಿಧಾಮ
ಮಂಡ್ಯ: ಕಾವೇರಿ ಕಣಿವೆಯಲ್ಲಿ ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ರಾಜ್ಯದ ಖ್ಯಾತ ಪ್ರವಾಸಿ ತಾಣ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿದರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಕೊಡಗು, ಮಡಿಕೇರಿ ಮತ್ತು ಭಾಗಮಂಡಲಗಳಲ್ಲಿ ಕಳೆದೊಂದು ವಾರದಿಂದ ಭಾರಿ ಮಳೆ ಸುರಿಯುತ್ತಿರುವುದರಿಂದ ಕೆಆರ್​ಎಸ್​ ಜಲಾಶಯಕ್ಕೆ ವಿಪರೀತ ನೀರು ಹರಿದುಬರುತ್ತಿದೆ. ಜಲಾಶಯದಿಂದ ನಿತ್ಯ ಸುಮಾರು 1.25 ಕ್ಯೂಸೆಕ್ಸ್ ಅಡಿ​ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸಿದ್ಧ ಪಕ್ಷಿಧಾಮ ರಂಗನತಿಟ್ಟು ಜಲಾವೃತಗೊಂಡಿದೆ.
ಭಾರಿ ಪ್ರಮಾಣದ ನೀರನ್ನು ಡ್ಯಾಂನಿಂದ ನದಿಗೆ ಬಿಡುಗಡೆ ಮಾಡುತ್ತಿರುವುದರಿಂದ ರಂಗನತಿಟ್ಟು ಜಲಾವೃತಗೊಂಡಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪಕ್ಷಿಧಾಮಕ್ಕೆ ಪ್ರವಾಸಿಗರ ಮತ್ತು ಪಕ್ಷಿ ವೀಕ್ಷಕರ ಭೇಟಿ ನಿಷೇಧಿಸಲಾಗಿದೆ. ಈ ಸಂಬಂಧ ಮೂರು ದಿನಗಳ ಹಿಂದೆಯೇ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ಈ ನಡುವೆ ಕಾವೇರಿಯ ಪ್ರವಾಹದಿಂದಾಗಿ ಶ್ರೀರಂಗಪಟ್ಟಣದ ವೆಲ್ಲಸ್ಲಿ ಸೇತುವೆ ಮಟ್ಟಕ್ಕೆ ನೀರು ಹರಿಯುತ್ತಿದ್ದು ಸೇತುವೆ ಮೇಲೆ ಸಂಚಾರ ನಿರ್ಬಂಧಿಸಲಾಗಿದೆ. ಸೇತುವೆಯ ಮುಂಭಾಗದಲ್ಲಿ ಗೋಡೆ ನಿರ್ಮಾಣ ಮಾಡಿರುವ ಸಂಚಾರ ಪೊಲೀಸರು ವಾಹನಗಳ ಸಂಚಾರವನ್ನು ತಡೆದಿದ್ದಾರೆ. ಅತ್ತ, ಚಾಮರಾಜನಗರದ ವೆಸ್ಲಿ ಸೇತುವೆಯೂ ಮುಳುಗಡೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com