ಸಂಪಾಜೆ ಘಾಟ್ ನಲ್ಲಿ ಭೂ ಕುಸಿತ, ಸಂಚಾರ ಬಂದ್: ಚಾರ್ಮಾಡಿಯಲ್ಲಿ ಭಾರಿ ವಾಹನಗಳಿಗೆ ನಿಷೇಧ

ಮಂಗಳೂರು -ಮಡಿಕೇರಿ ನಗರಗಳ ಸಂಪರ್ಕ ಕಲ್ಪಿಸುವ ಸಂಪಾಜೆ ಘಾಟ್ ನಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿರುವುದರಿಂದ ರಸ್ತೆ ಸಂಚಾರ ಬಂದ್ ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಮಂಗಳೂರು: ಮಂಗಳೂರು -ಮಡಿಕೇರಿ ನಗರಗಳ ಸಂಪರ್ಕ ಕಲ್ಪಿಸುವ ಸಂಪಾಜೆ ಘಾಟ್ ನಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿರುವುದರಿಂದ ರಸ್ತೆ ಸಂಚಾರ ಬಂದ್ ಆಗಿದ್ದು. ಈ ಮಾರ್ಗ ದುರಸ್ತಿಗೊಳಿಸಲು ತಿಂಗಳು ಸಮಯ ಬೇಕಾಗುತ್ತದೆ ಎಂದು ಹೇಳಲಾಗಿದೆ.
ಶಿರಾಡಿ ಘಾಟ್ ನಲ್ಲಿ ಆಗಸ್ಟ್ 20 ರವರೆಗೆ ಲಘು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಡಿಕೇರಿ ಮಂಗಳೂರು ಸಂಪರ್ಕ ಕಲ್ಪಿಸುವ ಸಂಪಾಜೆ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿರುವ ಕಾರಣ ಸಂಚಾರವನ್ನು ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಸಿ ಕುಮಾರ್ ಸೆಂಥಿಲ್ ಹೇಳಿದ್ದಾರೆ, 
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪರಿಹಾರ ದಳ ದಕ್ಷಿಣ ಕನ್ನಡ ಜಿಲ್ಲೆ ತಲುಪಿದ್ದು, ಸೇನೆ ಕೂಡಗಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದೆ ಎಂದು ತಿಳಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಪಿ ಡಬ್ಲ್ಯೂಡಿ ರಾಷ್ಚ್ರೀಯ ಹೆದ್ದಾರಿ ಸೂಪರಿಂಟೆಂಡ್ ಎಂಜಿನೀಯರ್ ಗಳು ಮೊದಲ ಭೂ ಕುಸಿತ ವಾದ ಸ್ಥಳಕ್ಕೆ ತಲುಪಿದ್ದಾರೆ, ಸುಮಾರು 4 ಸ್ಥಳಗಳಲ್ಲಿ ಭೂಕುಸಿತವಾಗಿದ್ದು, ಮಳೆ ನಿಲ್ಲದಿರುವುದು ಎಲ್ಲಾ ಕೆಲಸಗಳಿಗೂ ಅಡ್ಡಿಯಾಗಿದೆ.
ಭೂ ಕುಸಿತ ತೆರವುಗೊಳಿಸಿ ಮತ್ತೆ ಸಂಚಾರ ಆರಂಭಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ, ಅಲ್ಪಾವಧಿಯಲ್ಲಿ  ಭೂ ಕುಸಿತ ತೆರವುಗೊಳಿಸಿ ಸಂಚಾರಕ್ಕೆ ಸಿದ್ಧಗೊಳಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ,ಭೂ ಕುಸಿತದಿಂದಾಗಿ ಸಂಪಾಜೆ ಶಿರಾಡಿ ಘಾಟ್ ರಸ್ತೆ ಬಂದ್ ಗಳು ಆಗಿದ್ದು ಚಾರ್ಮಾಡಿ ಘಾಟ್ ನಲ್ಲಿ ಮಾತ್ರ ಸಂಚಾರ ಸಾಗಿದೆ. 
ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟ್, ಆರಂಭದಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಗಡಿ ಮುಟ್ಟುವವರೆಗೂ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಭೂ ಕುಸಿತ ಹಾಗೂ ಮಳೆಯ ಹಿನ್ನೆಲೆಯಲ್ಲಿ ಬಾರೀ ವಾಹನಗಳು, ಟ್ರಕ್ ಗಳು ಕಂಟೈನರ್ ಹಾಗೂ ಟ್ಯಾಂಕರ್ ಗಳ ಸಂಚಾರವನ್ನು ಚಾರ್ಮಾಡಿ ಘಾಟ್ ನಲ್ಲಿ ನಿಷೇಧಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com