ಕರಾವಳಿ, ಮಲೆನಾಡಿನಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಿಯ ಜನರು ಬೀದಿಗೆ ಬಂದಿದ್ದು, ಜೀವವನ್ನು ಕೈಯಲ್ಲಿ ಹಿಡಿದುಕೊಂಡು ರಸ್ತೆಗಳನ್ನು ದಾಟುತ್ತಿದ್ದಾರೆ. ಸಂಪಾಜೆಯ ಜೋಡುಪಾಳದಲ್ಲಿ ಗುಡ್ಡ ಕುಸಿತವಾದ ಹಿನ್ನೆಲೆಯಲ್ಲಿ ಪಿಎಸ್ ಐ ಮಂಜುನಾಥ್ ಹೆಗಲ ಮೇಲೆ ಸ್ಥಳೀಯರನ್ನ ಹೊತ್ತೊಯ್ದ ಸುರಕ್ಷಿತ ಸ್ಥಳಕ್ಕೆ ಸಾಗಿಸುತ್ತಿದ್ದಾರೆ. ಜನರನ್ನು ಒಂದೆಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಮಾರ್ಗ ಮಧ್ಯೆ ಹಗ್ಗ ಕಟ್ಟಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ ಮಂಜುನಾಥ್‍ರ ಕೆಲಸ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ. ರಭಸದಿಂದ ಹರಿಯುತ್ತಿರುವ ನೀರನ್ನು ದಾಟಿಸಲು ಮಂಜುನಾಥ್ ತಮ್ಮ ಭುಜದ ಮೇಲೆ ಹೊತ್ತು ಸಾಗಿಸುತ್ತಿರುವ ದೃಶ್ಯ ಇದೀಗ ವೈರಲ್ ಆಗಿದೆ.