

ಕೊಡಗು :ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎರಡನೇ ದಿನವಾದ ಇಂದು ಕೂಡಾ ಕೊಡಗಿನಲ್ಲಿ ಸುಮಾರು ಒಂದು ಗಂಟೆ 15 ನಿಮಿಷಗಳ ಕಾಲ ವೈಮಾನಿಕ ಸಮೀಕ್ಷೆ ನಡೆಸಿದರು.
ಮೈಸೂರು ವಿಮಾನ ನಿಲ್ದಾಣದಿಂದ ಹೊರಟು ಸೋಮವಾರಪೇಟೆ, ಶುಂಠಿ ಕೊಪ್ಪ, ಮಾದಾಪುರ, ಮುಕ್ಕೋಡ್ಲು, ಹಾರಂಗಿ ಹಿನ್ನೀರು ಪ್ರದೇಶ,ಸಿದ್ದಾಪುರ, ಕುಶಾಲನಗರ ಸುತ್ತಮುತ್ತಲಿನ ಪ್ರದೇಶಗಳ ಸಮೀಕ್ಷೆ ನಡೆಸಿದರು