ಬೆಂಗಳೂರು: ರಾಜಧಾನಿ ಬೆಂಗಳೂರಿನ ಖ್ಯಾತ ಉದ್ಯಾನವನ ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದೆ.
ಕಬ್ಬನ್ ಪಾರ್ಕ್ ನಲ್ಲಿ ಅನುಮಾನಸ್ಪದವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯುವತಿಯ ದೇಹ ಪತ್ತೆಯಾಗಿದ್ದು, ಇಂದು ಬೆಳಗ್ಗೆ ಉದ್ಯಾನದ ಸಿಬ್ಬಂದಿ ಇದನ್ನು ಗಮನಿಸಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತ ಯುವತಿಯನ್ನು ಸುಮಾರು 18 ವರ್ಷದ ಸಂತೋಷಿ ಎಂದು ಗುರುತಿಸಲಾಗಿದ್ದು, ಮರಕ್ಕೆ ವೇಲಿನಿಂದ ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸದ್ಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.