ಗಣೇಶ ವಿಸರ್ಜನೆಗೆ ಬೆಂಗಳೂರಿನಲ್ಲಿ 150 ಮೊಬೈಲ್ ಟ್ಯಾಂಕ್: ಮಂಜುನಾಥ್ ಪ್ರಸಾದ್

ಸೆಪ್ಟಂಬರ್ 13 ರಂದು ಗಣೇಶ ಚತುರ್ಥಿ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿ ವಿಸರ್ಜನೆಗಾಗಿ 150 ಮೊಬೈಲ್ ಟ್ಯಾಂಕ್ ಗಳನ್ನು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಸೆಪ್ಟಂಬರ್ 13 ರಂದು ಗಣೇಶ ಚತುರ್ಥಿ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿ ವಿಸರ್ಜನೆಗಾಗಿ 150 ಮೊಬೈಲ್ ಟ್ಯಾಂಕ್ ಗಳನ್ನು ನಿರ್ಮಿಸಲು ನಿರ್ಧರಿಸಿದೆ.
ಪ್ಲಾಸ್ಟರ್ ಆಪ್ ಪ್ಯಾರಿಸ್ ಗಣೇಶ ಮೂರ್ತಿಗಳಿಂದ ಪರಿಸರಕ್ಕೆ ಉಂಟಾಗುವ ಹಾನಿಯ ಬಗ್ಗೆ ಅರಿವು ಮೂಡಿಸಲು ಬಿಬಿಎಂಪಿ ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆ ಕೈ ಜೋಡಿಸಿದೆ. ಶಾಲಾ ಕಾಲೇಜುಗಳಿಗೆ ತೆರಳಿ ಜಾಗೃತಿ ಕಾರ್ಯಕ್ರಮ ಮೂಡಿಸುತ್ತಿದೆ ಎಂದು ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.  ಪ್ಲ್ಯಾಸ್ಟರ್ ಪ್ಯಾರಿಸ್ ವಿಗ್ರಹಗಳನ್ನು ಮಾಡುವವರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ,
ಈ ಸಂಬಂಧ ಹಲವು ಗಣೇಶ ತಯಾರಿಕಾ ಘಟಕಗಳಿಗೆ ಲಿಖಿತ ಸೂಚನೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಹೊರಡಿಸಿರುವ ಸುತ್ತೋಲೆ ಅನ್ವಯ ಗಣೇಶ ವಿಸರ್ಜಿಸಲು ಸಾರ್ವಜನಿಕರಿಗೆ ಆ ಪ್ರದೇಶದಲ್ಲಿ ಇರುವ ಮೊಬೈಲ್ ಟ್ಯಾಂಕ್  ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರತಿ ವಾರ್ಡ್ ನಲ್ಲೂ  ತಾತ್ಕಲಿಕ ವಿಸರ್ಜನಾ ಕೇಂದ್ರ ತೆರೆಯಲಾಗುವುದು, ಇದಕ್ಕಾಗಿ ಸಹಾಯವಾಣಿ ಕೂಡ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com