ಇಂದು ಕಾರ್ಕಳ ತಾಲೂಕಿನ ಕಣಜಾರು ಗ್ರಾಮದ ಕ್ವಾರಿಯಿಂದ ಸಮೀಪದ ಹಳ್ಳದ ನೀರು ಕಲುಷಿತಗೊಳ್ಳುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿ ವಿಚಾರಣೆ ವೇಳೆ ಕೇರಳ ಮತ್ತು ಕೊಡಗಿನ ಪ್ರವಾಹ ಪರಿಸ್ಥಿತಿಯನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿಗಳು, ಇಲ್ಲಿ ಪ್ರವಾಹ ಏಕಾಏಕಿ ಬಂದಿದ್ದಲ್ಲ, ಪ್ರವಾಹ ಪರಿಸ್ಥಿತಿಯನ್ನು ನಾವೇ ಸೃಷ್ಟಿಸಿಕೊಂಡಿದ್ದು ಎಂದರು.