ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿರುವ ಪರಿಣಾಮ ಹಲವೆಡೆ ಸಂಚಾರಕ್ಕೆ ಸಮಸ್ಯೆಗಳೆದುರಾಗಿತ್ತು. ಎಸ್'ಕೆ ಬಾರ್ಡರ್ ಮತ್ತು ಕುದರೇಮುಖ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರಕ್ಕೆ ತಡೆಯುಂಟಾಗಿತ್ತು. ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಕುದುರೆಮುಖದಿಂದಲೇ ಕೆಎಸ್ಆರ್'ಟಿಸಿ ಬಸ್ ಗಳನ್ನು ತಡೆಯಲಾಯಿತು. ಆದರೆ, ಖಾಸಗಿ ಬಸ್ ಗಳು, ಲಾರಿಗಳು ಹಾಗೂ ಟ್ರಕ್ ಗಳು ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಪರಿಣಾಮ ಗಂಟೆಗಟ್ಟಲೆ ಸಂಚಾರ ದಟ್ಟಣೆ ಎದುರಾಗಿತ್ತು.