ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಗೆ: ಶೀಘ್ರದಲ್ಲೇ ಶಿಕ್ಷಣ ಇಲಾಖೆಯಿಂದ ನಿರ್ಧಾರ

ಜನಪ್ರತಿನಿಧಿಗಳು, ಐಎಎಸ್ ಅಧಿಕಾರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಕಳುಹಿಸಬೇಕೆಂಬ ಹೊಸ ಕಾನೂನನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸರ್ಕಾರಿ ಶಾಲೆಗಳು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಜನಪ್ರತಿನಿಧಿಗಳು, ಐಎಎಸ್ ಅಧಿಕಾರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಕಳುಹಿಸಬೇಕೆಂಬ ಹೊಸ ಕಾನೂನನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸರ್ಕಾರಿ ಶಾಲೆಗಳು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. 
ಕಾನೂನು ಜಾರಿಗೆ ತರುವ ಕುರಿತಂತೆ ರಾಜ್ಯ ಸರ್ಕಾರ ಕೂಡ ಎಲ್ಲಾ ರೀತಿಯಲ್ಲಿಯೂ ಪರಿಶೀಲನೆಗಳನ್ನು ನಡೆಸುತ್ತಿದ್ದು, ಇತರೆ ರಾಜ್ಯಗಳ ನ್ಯಾಯಾಲಯದ ಆದೇಶಗಳನ್ನು ಪರಿಶೀಲನೆ ನಡೆಸುತ್ತಿದೆ. 
ಇದಲ್ಲದೆ ನಿನ್ನೆ ಕೂಡ ರಾಜ್ಯ ಪ್ರಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಕಾಮೂನು ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಈ ಬಗ್ಗೆ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇ ಗೌಡ ಅವರೊಂದಿಗೂ ಸಭೆ ನಡೆದಿದೆ ಎಂದು ಹೇಳಲಾಗುತ್ತಿದೆ. 
ಸಭೆಗೆ ಹಾಜರಿದ್ದ ಕೆಲ ಮೂಲಗಳು ಮಾಹಿತಿ ನೀಡಿದ್ದು, ಕಾನೂನು ರೂಪಿಸುವುದಕ್ಕೂ ಮುನ್ನ ಎಲ್ಲಾ ರೀತಿಯ ಕಾನೂನು ಮತ್ತು ಆದೇಶಗಳ ಕುರಿತಂತೆ ಪರಿಶೀಲನೆ ನಡೆಸಲಾಗುತ್ತಿದೆ. ಇತರೆ ರಾಜ್ಯಗಳ, ನ್ಯಾಯಾಲಯದ ಆದೇಶಗಳನ್ನು ಪರಿಶೀಲನೆ ನಡೆಸುವುದಕ್ಕೂ ಮುನ್ನ ಕಾನೂನು ರೂಪಿಸಲು ಸಾಧ್ಯವಿಲ್ಲ ಎಂದು ಹೇಳಿದೆ. 
2017ರ ನವೆಂಬರ್ ತಿಂಗಳಿನಲ್ಲಿ ನಡೆದ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಎಂಎಲ್'ಸಿ ಜಿ.ರಘು ಆಚಾರ್ ಅವರು ಖಾಸಗಿ ಕಾನೂನನ್ನು ಪ್ರಸ್ತಾಪ ಮಾಡಿದ್ದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. 
ರಘು ಅವರ ಪ್ರಸ್ತಾಪಕ್ಕೆ ನಕಾರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ಈ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ತನ್ವೀರ್ ಸೇಟ್ ಅವರು ಧನಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದರು. ಕಾನೂನು ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಅಂಗೀಕಾರಗೊಂಡಿದ್ದೇ ಆದರೆ, ಸರ್ಕಾರ ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಂಡು ನಿಯಮಗಳನ್ನು ರೂಪಿಸುತ್ತದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com