ಮಳೆ, ಭೂಕುಸಿತದಿಂದ ಹಾನಿಗೊಳಗಾದ ಕೊಡಗು ಜಿಲ್ಲೆಗೆ ಸಿದ್ದರಾಮಯ್ಯ ಭೇಟಿ; ಪರಿಸ್ಥಿತಿ ಪರಾಮರ್ಶನ

ಮಳೆ ಮತ್ತು ಭೂಕುಸಿತದಿಂದ ಹಾನಿಗೀಡಾಗಿರುವ ಕೊಡಗು ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಪರಿಸ್ಥಿತಿ ಪರಾಮರ್ಶೆ ನಡೆಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಡಿಕೇರಿ: ಮಳೆ ಮತ್ತು ಭೂಕುಸಿತದಿಂದ ಹಾನಿಗೀಡಾಗಿರುವ ಕೊಡಗು ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು  ಭೇಟಿ ನೀಡಿ ಪರಿಸ್ಥಿತಿ ಪರಾಮರ್ಶೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡುರಾವ್‌ ಅವರೊಂದಿಗೆ ಮಡಿಕೇರಿಗೆ ತೆರಳಿದ  ಸಿದ್ದರಾಮಯ್ಯ ಜಲಪ್ರಳಯದಿಂದ ತತ್ತರಿಸಿ ಹೋಗಿರುವ  ಕೊಡಗು ಜಿಲ್ಲೆಯಲ್ಲಿ ಪ್ರವಾಸ ನಡೆಸಿ ಸಂತ್ರಸ್ತರ ಗೋಳು ಆಲಿಸಿದರು.
ಕುಶಾಲನಗರ, ಮಡಿಕೇರಿ ಸೇರಿದಂತೆ ವಿವಿಧೆಡೆ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಮಹಿಳೆಯರು, ನೊಂದವರ ಸಂಕಷ್ಟಗಳನ್ನು  ಅರಿತರು.
ಕಾರು ಬಿಟ್ಟು ಜೀಪ್‌ನಲ್ಲೇ ತೆರಳಿ ಗುಡ್ಡ ಕುಸಿದ ಸ್ಥಳಗಳು, ಹಾನಿಗೀಡಾದ ರಸ್ತೆಗಳ ಪರಿಶೀಲನೆ ನಡೆಸಿದರು. ಅಧಿಕಾರಿಗಳೊಂದಿಗೂ ಮಾತುಕತೆ ನಡೆಸಿ ಸಲಹೆ ನೀಡಿದರು.
ಈ ಮಧ್ಯೆ ಪ್ರವಾಹ ಪೀಡಿತ ಕೊಡಗಿನಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳು ಬಿರುಸುಗೊಂಡಿದ್ದು, ಕಳೆದೊಂದು ವಾರದಿಂದ ಸುರಿದ ಮಳೆಯಿಂದಾಗಿ 12 ಮಂದಿ ಸಾವನ್ನಪ್ಪಿದ್ದು,  ಜಿಲ್ಲೆಯನ್ನು ಮತ್ತೆ ಕಟ್ಟುವ ನಿಟ್ಟಿನಲ್ಲಿ ಪಯತ್ನ ನಡೆಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.
ಪರಿಹಾರ ಕಾರ್ಯಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ 25 ಕೋಟಿ ರೂಪಾಯಿಯನ್ನು ಮೀಸಲಿರಿಸಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಸ್ತೆ ಸುಧಾರಣೆ ಕೆಲಸ ವಿಳಂಬವಾಗಲಿದೆ ಆದರೆ ಶೀಘ್ರದಲ್ಲಿಯೇ ಕೊಡಗು ಸಹಜ ಸ್ಥಿತಿಯತ್ತ ಮರಳುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com