ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಪತ್ರ: 2,000 ಕೋಟಿ ಮಧ್ಯಂತರ ಪರಿಹಾರಕ್ಕೆ ಮನವಿ

ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಬಗ್ಗೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ 2,000 ಕೋಟಿ ರೂಪಾಯಿ ಹಣ ಬಿಡುಗಡೆ
ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಪತ್ರ: 2,000 ಕೋಟಿ ಮಧ್ಯಂತರ ಪರಿಹಾರಕ್ಕೆ ಮನವಿ
ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಪತ್ರ: 2,000 ಕೋಟಿ ಮಧ್ಯಂತರ ಪರಿಹಾರಕ್ಕೆ ಮನವಿ
Updated on: 
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಬಗ್ಗೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ 2,000 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲು ಮನವಿ ಮಾಡಿದ್ದಾರೆ. 
ಪ್ರವಾಹದಿಂದಾಗಿ ರಾಜ್ಯದಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ, ಬೆಳೆಗಳಿಗೆ ಉಂಟಾದ ನಷ್ಟ ಸೇರಿದಂತೆ ಒಟ್ಟಾರೆ 3,000 ಕೋಟಿ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ. ಇದು ಮಧ್ಯಂತರ ಅಂದಾಜಾಗಿದ್ದು, ಪೂರ್ಣ ಪ್ರಮಾಣದಲ್ಲಿ ನಷ್ಟದ ಅಂಕಿ-ಅಂಶಗಳು ಇನ್ನಷ್ಟೇ ಸಿಗಬೇಕಿದೆ ಎಂದು ಪತ್ರದಲ್ಲಿ ಕುಮಾರಸ್ವಾಮಿ ತಿಳಿಸಿದ್ದಾರೆ. 
ಭೂಕುಸಿತದಿಂದಾಗಿ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಫಿ, ಮೆಣಸು, ಅಡಿಕೆ ಸೇರಿದಂತೆ ಹಲವು ಬೆಳೆಗಳು ನಷ್ಟವಾಗಿದ್ದು,  ಎಸ್ಟೇಟ್ ಗಳು ಸಂಪೂರ್ಣ ನಾಶವಾಗಿರುವುದರ ಬಗ್ಗೆ ಕುಮಾರಸ್ವಾಮಿ ಮೋದಿಗೆ ಬರೆದಿರುವ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ. ಜಲಾವೃತಗೊಂಡಿದ್ದ ಕೊಡಗನ್ನು ಮರುನಿರ್ಮಾಣ ಮಾಡುವುದಕ್ಕಾಗಿ ಮಧ್ಯಂತರವಾಗಿ 2,000 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕೆಂದು ಕುಮಾರಸ್ವಾಮಿ ಪ್ರಧಾನಿಗೆ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com