ಚಿಕ್ಕಬಳ್ಳಾಪುರ: ಕ್ಯಾಂಟರ್-ಸ್ಕಾರ್ಪಿಯೋ ನಡುವೆ ಭೀಕರ ಅಪಘಾತ; ಮೂವರ ದಾರುಣ ಸಾವು

ಕ್ಯಾಂಟರ್ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಸ್ಥಳದಲ್ಲೇ ಮೂವರು ದಾರುಣ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಚಿಕ್ಕಬಳ್ಳಾಪುರ: ಕ್ಯಾಂಟರ್ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಸ್ಥಳದಲ್ಲೇ ಮೂವರು ದಾರುಣ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. 
ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ವೈಜಕೂರು ಬಳಿ ಭೀಕರ ಅಪಘಾತ ಸಂಭವಿಸಿದೆ. ಮೃತರು ರಾಯಚೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದೆ. 
ಸ್ಕಾರ್ಪಿಯೋ ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com