ಪಿಒಪಿ ಘಟಕಕ್ಕೆ ದಾಳಿ: 853 ಗಣಪತಿ ವಿಗ್ರಹ ಜಪ್ತಿ

ಪ್ಲಾಸ್ಟರ್ ಆಫ್ ಪ್ಯಾರಿಸ್'ನಿಂದ (ಪಿಒಪಿ) ಗಣೇಶ ವಿಗ್ರಹ ತಯಾರಿಕೆ ಮತ್ತು ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಬಿಬಿಎಂಪಿ ಅಧಿಕಾರಿಗಳು ಶನಿವಾರ ನಗರದ 4 ಗಣೇಶ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಪ್ಲಾಸ್ಟರ್ ಆಫ್ ಪ್ಯಾರಿಸ್'ನಿಂದ (ಪಿಒಪಿ) ಗಣೇಶ ವಿಗ್ರಹ ತಯಾರಿಕೆ ಮತ್ತು ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಬಿಬಿಎಂಪಿ ಅಧಿಕಾರಿಗಳು ಶನಿವಾರ ನಗರದ 4 ಗಣೇಶ ವಿಗ್ರಹ ತಯಾರಿಕಾ ಮತ್ತು ಮಾರಾಟ ಘಟಕಗಳ ಮೇಲೆ ದಾಳಿ ನಡೆಸಿದ್ದು, 853 ಪಿಒಪಿ ಗಣೇಶ ವಿಗ್ರಹಗಳನ್ನು ವಶಪಡಿಸಿಕೊಂಡು ಘಟಕಗಳಿಗೆ ಬೀಗ ಜಡಿದಿದ್ದಾರೆ. 
ಕಳೆದ 2 ವರ್ಷಗಳಿಂದ ಪಿಒಪಿ ಗಣೇಶ ತಯಾರಿಕೆ ಮತ್ತು ಮಾರಾಟ ನಿಷೇಧಿಸಲಾಗಿದೆಯಾದರೂ ನಗರದಲ್ಲಿ ಪಿಒಪಿ ಗಣೇಶಗಳ ತಯಾರಿಕೆ ಮತ್ತು ಮಾರಾಟ ಎಗ್ಗಿಲ್ಲದೆ ನಡೆದೇ ಇದೆ. ಈ ಬಾರಿಯೂ ನಗರದ ಹಲವು ಗಣೇಶ ಮೂರ್ತಿ ತಯಾರಿಕಾ ಘಟಕಗಳು, ವ್ಯಾಪಾರಿಗಳು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಪಿಒಪಿ ವಿಗ್ರಹ ತಯಾರಿಸಿ ಮಾರಾಟಕ್ಕೆ ಇಟ್ಟಿದ್ದಾರೆ. 
ಹೀಗಾಗಿ ಈ ಬಾರಿ ಪಿಒಪಿ ಗಣೇಶಗಳ ತಯಾರಿಕೆ, ಮಾರಾಟದ ಮೇಲೆ ಸಂಪೂರ್ಣ ನಿಯಂತ್ರಣ ಹೇರಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಬಿಬಿಎಂಪಿ ಮುಂದಾಗಿದೆ. 
ಈ ನಿಟ್ಟಿನಲ್ಲಿ ವಿಗ್ರಹ ತಯಾರಿಕಾ ಘಟಕಗಳ ಮೇಲೆ ದಾಳಿ ಆರಂಭಿಸಿದ್ದು, ಮೊದಲ ದಿನವೇ ನಗರದ ಆರ್.ವಿ. ರಸ್ತೆಯ ಪ್ರಮುಖ ನಾಲ್ಕು ವಿಗ್ರಹ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ 853 ಪಿಒಪಿ ಗಣೇಶ ವಿಗ್ರಹ ವಶಪಡಿಸಿಕೊಂಡು ಘಟಕಗಳಿಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com