'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ತವರೂರು ಮೈಸೂರಿನಲ್ಲಿ ಬೀಡುಬಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಿಷಬ್ ಶೆಟ್ಟಿ ನಿರ್ದೇಶನದ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಕೊಡಗು ರಾಮಣ್ಣ ರೈ ಚಿತ್ರವನ್ನು ವೀರ್ಷಣೆ ಮಾಡಿದರು...
'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
Updated on: 
ಮೈಸೂರು: ತವರೂರು ಮೈಸೂರಿನಲ್ಲಿ ಬೀಡುಬಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಿಷಬ್ ಶೆಟ್ಟಿ ನಿರ್ದೇಶನದ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಕೊಡಗು ರಾಮಣ್ಣ ರೈ ಚಿತ್ರವನ್ನು ವೀರ್ಷಣೆ ಮಾಡಿದರು. 
ಜಯಲಕ್ಷ್ಮೀಪುರಂನಲ್ಲಿರುವ ಡಿಆರ್'ಸಿ ಮಲ್ಟಿಪ್ಲೆಕ್ಸ್ ಚಿತ್ರದಲ್ಲಿ ಸಿದ್ದರಾಮಯ್ಯ ಅವರು ಚಿತ್ರ ವೀಕ್ಷಣೆ ಮಾಡಿದರು. ಹುಣಸೂರಿನ ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್, ಆಪ್ತ ಸ್ನೇಹಿತ ಮರಿಸ್ವಾಮಿ ಜೊತೆಗೂಡಿ ಸಂಜೆ ಸಿನಿಮಾ ವೀಕ್ಷಣೆ ಮಾಡಿದ ಸಿದ್ದರಾಮಯ್ಯ, ಇಡೀ ದಿನ ಆರಾಮಾಗಿ ಸಮಯ ಕಳೆದರು. 
ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರು ಬೆಳಿಗ್ಗೆ ರಮ್ಯಾ ಹೋಟೆಲ್'ಗೆ ಭೇಟಿ ನೀಡಿ ತಮ್ಮ ಮೆಚ್ಚಿನ ಬೋಂಡಾ-ಸಾಂಬಾರ್, ದೋಸೆ ಸವಿದರು. 
ಮಾಲ್'ಗೆ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದಂತೆಯೇ ಸ್ಥಳದಲ್ಲಿದ್ದ ಜನರು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದರು. ಸಿದ್ದರಾಮಯ್ಯ ಅವರು ನಗುತ್ತಲೆ ಜನರೊಂದಿಗೆ ಸೆಲ್ಫೀಗೆ ಪೋಸ್ ನೀಡಿದರು. 
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಡಾ.ಯತೀಂದ್ರ ಜೊತೆ ಯುರೋಪ್ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಲಂಡನ್ ನಲ್ಲಿರುವ ನನ್ನ ಸ್ನೇಹಿತ ಬಹಳ ವರ್ಷದಿಂದ ಕರೆಯುತ್ತಿದ್ದಾನೆ. ಸೆ.3ರಿಂದ ಯುರೋಪ್ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಮುಖ್ಯಮಂತ್ರಿಯಾಗಿದ್ದಾಗ ಪ್ರವಾಸ ಹೋಗಲು ಆಗಿರಲಿಲ್ಲ. ಹೀಗಾಗಿ ಇದೀಗ ಪ್ರವಾಸಕ್ಕೆ ಹೋಗುತ್ತಿದ್ದೇನೆ. ನನ್ನ ಜೊತೆ ಸಚಿವರಾದ ಆರ್.ವಿ.ದೇಶಪಾಂಡೆ. ಕೆ.ಜೆ.ಜಾರ್ಜ್, ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದ ರಾಜು ಸಹ ಬರುತ್ತಿದ್ದಾರೆಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com