ಕೊಡಗು ಪ್ರವಾಹ: ಕೇಂದ್ರ ಸಚಿವರ ಭೇಟಿ ವೇಳೆ ನಡೆದ ಘಟನೆಗೆ ವಿಷಾದವಿದೆ: ಸಿಎಂ ಎಚ್ ಡಿಕೆ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ಕೊಡಗು ಭೇಟಿ ವೇಳೆ ನಡೆದ ಘಟನೆ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ಕೊಡಗು ಭೇಟಿ ವೇಳೆ ನಡೆದ ಘಟನೆ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ ಅವರು, 'ಕೊಡಗಿನಲ್ಲಿ ರಕ್ಷಣಾ ಸಚಿವರ ಭೇಟಿ ವೇಳೆ ನಡೆದ ಘಟನೆಗೆ ವಿಷಾದವಿದೆ. ಘಟನೆ ಕುರಿತಂತೆ ಸಚಿವರೊಂದಿಗೆ ಫೋನ್‌ ಮೂಲಕ ಮಾತನಾಡಿದ್ದೇನೆ. ಸಣ್ಣ ಪುಟ್ಟ ಘಟನೆಗಳನ್ನು ಎಲ್ಲರೂ ಮರೆತು ಒಟ್ಟಿಗೆ ಕೈಜೋಡಿಸಿ ಪರಿಸ್ಥಿತಿಯನ್ನು ಎದುರಿಸಲು ನೆರವಾಗಬೇಕು. ಕೊಡಗಿನ ಪುನರ್‌ ನಿರ್ಮಾಣಕ್ಕೆ ಕೈಜೋಡಿಸಬೇಕು. ಪುನರ್‌ ನಿರ್ಮಾಣ ಕಾರ್ಯಕ್ಕೆ ಸಹಾಯಕ್ಕಾಗಿ ರಕ್ಷಣಾ ಸಚಿವೆ, ಕೇಂದ್ರಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಅಂತೆಯೇ ಕೊಡಗು ಪ್ರವಾಹದ ವೇಳೆ ನೆರವು ನೀಡಿದ್ದ ಕೇಂದ್ರ ಸರ್ಕಾರಕ್ಕೂ ಕುಮಾರಸ್ವಾಮಿ ಅಭಿನಂದನೆ ಸಲ್ಲಿಕೆ ಮಾಡಿದರು. ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ರಕ್ಷಣಾ ಸಿಬ್ಬಂದಿಗಳನ್ನು ಕೊಡಗಿಗೆ ರವಾನೆ ಮಾಡಿತು. ಕೊಡಗಿನ ಪುನರ್ ನಿರ್ಮಾಣಕ್ಕೆ ಕೇಂದ್ರದ ಬೆಂಬಲ ಅತ್ಯಗತ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಕೊಡಗಿನ ನೆರೆ ಪರಿಸ್ಥಿತಿಯನ್ನು ನಿಭಾಯಿಸಲು ಪ್ರವಾಸ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ಅವರು ಕೂಡ ಮೊದಲ ದಿನದಿಂದಲೂ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಸರ್ಕಾರವು ನೆರೆ ಸಂತ್ರಸ್ತರ ಜತೆಗಿದೆ ಎಂದು ಎಚ್ ಡಿಕೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com