
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಶ್ಚಿಮ ಕಾರ್ಡ್ ರಸ್ತೆಯಲ್ಲಿನ ಮೇಲು ಸೇತುವೆಯನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದು ಉದ್ಘಾಟಿಸಿದರು.
ರಾಜ್ಯಸಭಾ ಸದಸ್ಯ ಎಲ್ ಹನುಮಂತಯ್ಯ, ಶಾಸಕ ಸುರೇಶ್ ಕುಮಾರ್, ಮೇಯರ್ ಸಂಪತ್ ರಾಜ್ ಮೊದಲಾದವರು ಪಾಲ್ಗೊಂಡಿದ್ದರು.
ಬಳಿಕ ಮಾತನಾಡಿದ ಡಾ. ಜಿ. ಪರಮೇಶ್ವರ್, ಸುಮಾರು 18 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲು ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಟೆಂಡರ್ ಕರೆಯುವ ಸಂದರ್ಭದಲ್ಲಿ ಸಮಯ ನಿಗದಿಪಡಿಸಬೇಕು, ಕಾಲ ಮಿತಿಯಲ್ಲಿ ಕಾಮಗಾರಿ ಪೂರ್ಣ ಮಾಡುವಂತೆ ಗುತ್ತಿಗೆದಾರರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಶೀಘ್ರ ಕಾಮಗಾರಿ ನಡೆದು ಸಾರ್ವಜನಿಕರಿಗೆ ಅನುಕೂಲವಾಗಬೇಕು ಎಂದು ಅವರು ಹೇಳಿದರು.
ಬಯೋಮೆಟ್ರಿಕ್ ಅಳವಡಿಕೆಯಿಂದ ಪೌರಕಾರ್ಮಿಕರ ವೇತನದಲ್ಲಾಗುತ್ತಿದ್ದ ಭ್ರಷ್ಟಾಚಾರ ನಿಯಂತ್ರಣಗೊಂಡಿದ್ದು, ಬೆಂಗಳೂರು ಮುಂದಿನ ಮಹಾಪೌರರ ಆಯ್ಕೆಯನ್ನು ಪಾಲಿಕೆ ಸದಸ್ಯರೇ ತಿರ್ಮಾನ ಮಾಡಲಿದ್ದಾರೆ ಎಂದು ಡಾ. ಜಿ. ಪರಮೇಶ್ವರ್ ತಿಳಿಸಿದರು.
Advertisement