ಬೆಂಗಳೂರಿಗೆ ಹೊಸ ಜಾಹೀರಾತು ನೀತಿ: ಡಿಸಿಎಂ ಪರಮೇಶ್ವರ

ನಗರದಲ್ಲಿ ಜಾಹೀರಾತು ವ್ಯವಹಾರವನ್ನು ಸುಗಮಗೊಳಿಸುವುದಕ್ಕಾಗಿ ಹೊಸ ಜಾಹೀರಾತು ನೀತಿ ಜಾರಿಗೆ....
ಜಿ ಪರಮೇಶ್ವರ
ಜಿ ಪರಮೇಶ್ವರ
ಬೆಂಗಳೂರು: ನಗರದಲ್ಲಿ ಜಾಹೀರಾತು ವ್ಯವಹಾರವನ್ನು ಸುಗಮಗೊಳಿಸುವುದಕ್ಕಾಗಿ ಹೊಸ ಜಾಹೀರಾತು ನೀತಿ ಜಾರಿಗೆ ತರುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಾ.ಜಿ ಪರಮೇಶ್ವರ ಅವರು ಸೋಮವಾರ ಹೇಳಿದ್ದಾರೆ.
ಇಂದು ಕಾರ್ಡ್ ರಸ್ತೆಯಲ್ಲಿ ಮೇಲು ಸೇತುವೆಯನ್ನುಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಹೈಕೋರ್ಟ್ ಆದೇಶದಂತೆ ಬಿಬಿಎಂಪಿ ನಗರದಲ್ಲಿನ ಎಲ್ಲಾ ಅಕ್ರಮ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ತೆರವುಗೊಳಿಸಿದೆ. ಆದರೆ ಜಾಹೀರಾತುದಾರರು ತಮ್ಮ ವ್ಯವಹಾರಕ್ಕೆ ಬೆಂಬಲ ನೀಡುವಂತೆ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ಹೀಗಾಗಿ ಹೊಸ ಜಾಹೀರಾತು ನೀತಿಗೆ ಬಗ್ಗೆ ಚಿಂತನೆ ನಡೆದಿದೆ ಎಂದರು.
ಸುಮಾರು 18 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲು ಸೇತುವೆ ನಿರ್ಮಾಣ ಮಾಡಲಾಗಿದೆ. ಇದರಿಂದಾಗಿ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ ಎಂದು ಡಿಸಿಎಂ ತಿಳಿಸಿದರು.
ಇದೇ ವೇಳೆ ಬಯೋಮೆಟ್ರಿಕ್ ಅಳವಡಿಕೆಯಿಂದ ಪೌರಕಾರ್ಮಿಕರ ವೇತನದಲ್ಲಾಗುತ್ತಿದ್ದ ಭ್ರಷ್ಟಾಚಾರ ನಿಯಂತ್ರಣಗೊಂಡಿದ್ದು, ಬೆಂಗಳೂರು ಮುಂದಿನ ಮಹಾಪೌರರ ಆಯ್ಕೆಯನ್ನು ಪಾಲಿಕೆ ಸದಸ್ಯರೇ ತಿರ್ಮಾನ ಮಾಡಲಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com