ಕರ್ನಾಟಕ: ಬೆಂಬಲ ಬೆಲ ನೀಡಿ ಹೆಸರು ಕಾಳು ಖರೀದಿಗೆ ಕೇಂದ್ರ ಒಪ್ಪಿಗೆ

ಉತ್ಪಾದನೆ ಹೆಚ್ಚಾಗಿ ಮಾರುಕಟ್ಟೆಯಲ್ಲಿ ಹೆಸರು ಕಾಳು ಬೆಲೆ ಕುಸಿತ ಕಂಡಿರುವ ಹಿನ್ನಲೆಯಲ್ಲಿ ಪ್ರತಿ ಕ್ರಿಂಟಲ್'ಗೆ ರೂ.6,975 ಬೆಂಬಲ ಬೆಲ ನೀಡಿ ಖರೀದಿ ಮಾಡಲು ಕೇಂದ್ರ ಸರ್ಕಾರ ಗುರುವಾರ ಒಪ್ಪಿದೆ ನೀಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಉತ್ಪಾದನೆ ಹೆಚ್ಚಾಗಿ ಮಾರುಕಟ್ಟೆಯಲ್ಲಿ ಹೆಸರು ಕಾಳು ಬೆಲೆ ಕುಸಿತ ಕಂಡಿರುವ ಹಿನ್ನಲೆಯಲ್ಲಿ ಪ್ರತಿ ಕ್ರಿಂಟಲ್'ಗೆ ರೂ.6,975 ಬೆಂಬಲ ಬೆಲ ನೀಡಿ ಖರೀದಿ ಮಾಡಲು ಕೇಂದ್ರ ಸರ್ಕಾರ ಗುರುವಾರ ಒಪ್ಪಿದೆ ನೀಡಿದೆ. 
ಬೆಂಬಲ ಬೆಲೆ ನೀಡಲು ಕೇಂದ್ರ ಸರ್ಕಾರ ಒಪ್ಪಿದೆ ನೀಡಿದ ಹಿನ್ನಲೆಯಲ್ಲಿ ಮುಂದಿನ ವಾರದಿಂದಲೇ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ಕೃಷಿ ಸಚಿವ ಎನ್.ಹೆಚ್. ಶಿವಶಂಕರ ರೆಡ್ಡಿಯವರು ಹೇಳಿದ್ದಾರೆ. 
ವಿಕಾಸಸೌಧದಲ್ಲಿ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷ 3.83 ಲಕ್ಷ ಹೆಕ್ಟೇರಿನಲ್ಲಿ ಹೆಸರುಕಾಳು ಬೆಳೆಯುವ ನಿರೀಕ್ಷೆ ಹೊಂದಲಾಗಿತ್ತು. ಆದರೆ, 4.23 ಲಕ್ಷ ಹೆಕ್ಟೇರಿನಲ್ಲಿ ಬಿತ್ತನೆಯಾಗಿದ್ದು, ಉತ್ಪಾದನೆ ಹೆಚ್ಚಾಗಿದೆ. ಆದರೆ, ಮಾರುಕಟ್ಟೆಯಲ್ಲಿ ಪ್ರತಿ ಕ್ರಿಂಟಾಲ್'ಗೆ ರೂ.4,200ಗಳಿಂದ ರೂ.4,300 ಮಾತ್ರ ಬೆಲೆ ಇದೆ. 
ಹೀಗಾಗಿ ರೈತರ ನೆರವಿಗೆ ಧಾವಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಮೊದಲ ಹಂತದಲ್ಲಿ 23.25 ಮೆಟ್ರಿಕ್ ಟನ್ ಹೆಸರು ಕಾಳಿ ಖರೀದಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಿ ವಾರದಲ್ಲಿ ಖರೀದಿ ಪ್ರಕ್ರಿಯೆ ಆರಂಭ ಮಾಡಲಾಗುವುದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com