ಗೌರಿ ಹತ್ಯೆ ಪ್ರಕರಣ: ಹತ್ಯೆ ಸಂಚು ಕುರಿತಂತೆ ಸನಾತನ ಸಂಸ್ಥೆಗೆ ಮಾಹಿತಿ ಇತ್ತು!

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸುತ್ತಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸುತ್ತಿದ್ದಾರೆ. 
ಸನಾತನ ಸಂಸ್ಥೆ ನಾಯಕರಿಗೆ ತಮ್ಮ ಅನುಯಾಯಿಗಳು ಕೆಲ ಚಿಂತಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬ ಮಾಹಿತಿಗಳಿದ್ದವು ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ. 
ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿರುವ ತಮ್ಮ ಐವರು ಅನುಯಾಯಿಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಕುರಿತು ಸನಾತನ ಸಂಸ್ಥೆಗೆ ಮಾಹಿತಿ ಇತ್ತು. ಗೋವಾದಲ್ಲಿರುವ ಸನಾತನ ಸಂಸ್ಥೆಯ ನಾಯಕರಿಗೆ ಈ ಬಗ್ಗೆ ಮಾಹಿತಿಯಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. 

ಸನಾತ ಸಂಸ್ಥೆ ನಾಯಕರಿಗೆ ಹತ್ಯೆ ಕುರಿತು ಮಾಹಿತಿಯೇ ಇರಲಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಸನಾತನ ಸಂಸ್ಥೆಗೆ ಈ ಬಗ್ಗೆ ಖಂಡಿತವಾಗಿಯೂ ತಿಳಿದಿತ್ತು. ಸನಾತನ ಸಂಸ್ಥೆಯೊಂದಿಗೆ ನಂಟು ಹೊಂದಿರುವ ಹಲವರನ್ನು ಬಂಧನಕ್ಕೊಳಪಡಿಸಲಾಗಿದೆ. ಆದರೆ, ಸಂಸ್ಥೆ ಮಾತ್ರ ಅವರು ತಮ್ಮ ಸದಸ್ಯರಲ್ಲ ಎಂದು ಹೇಳುತ್ತಿದೆ. 

ಈ ಕುರಿತಂತೆ ಹೇಳಿಕೆ ನೀಡಿರುವ ಸನಾತನ ಸಂಸ್ಥೆಯ ವಕ್ತಾರ ಚೇತನ್ ರಝನ್ ಅವರು, ಕೆಲ ಪ್ರಗತಿ ಶೀಲ ಮನಸ್ಥಿತಿಯುಳ್ಳವರು ಕಾಂಗ್ರೆಸ್ ನಂತಹ ಕೆಲ ರಾಜಕೀಯ ಪಕ್ಷಗಳು ಯಾವುದೇ ರೀತಿಯ ಸಾಕ್ಷ್ಯಾಧಾರಗಳಿಲ್ಲದೆ ಸಂಸ್ಥೆ ಮೇಲೆ ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com