2019ರಿಂದ ಆನ್ ಲೈನ್ ನಲ್ಲಿ ಸಿಇಟಿ ಪರೀಕ್ಷೆ ಸಾಧ್ಯತೆ?

ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ವೃತ್ತಿಪರ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆ- ಸಿಇಟಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಚಿಂತನೆ ನಡೆಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ವೃತ್ತಿಪರ ಕೋರ್ಸ್ ಗಳ  ಸಾಮಾನ್ಯ ಪ್ರವೇಶ ಪರೀಕ್ಷೆ- ಸಿಇಟಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಚಿಂತನೆ ನಡೆಸಿದೆ.

ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸರ್ಕಾರದ ಅನುಮತಿಗಾಗಿ ಕಾಯಲಾಗುತ್ತಿದೆ. ಈ ಮಾದರಿಯನ್ನು ಪರಿಚಯಿಸುವ ಮುನ್ನ ಎರಡು ಅಥವಾ ಮೂರು ಪೂರ್ವಭಾವಿ ಪರೀಕ್ಷೆಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

ಎಂಜಿನಿಯರಿಂಗ್, ಕೃಷಿ ಮತ್ತು ಪಶು ವೈದ್ಯ ವಿಜ್ಞಾನ, ಅರ್ಕಿಟೆಕ್ಟರ್ ಮತ್ತಿತರ ಕೋರ್ಸ್ ಗಳಿಗೆ ಸಾಮಾನ್ಯ ಪರೀಕ್ಷೆ ನಡೆಸಲಾಗುತ್ತದೆ. ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ರಾಷ್ಟ್ರೀಯ ಮಾಹಿತಿ ಕೇಂದ್ರ ಈಗಾಗಲೇ ಸಾಪ್ಟ್ ವೇರ್ ಸಿದ್ಧಪಡಿಸಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಈ ಪ್ರಸ್ತಾವನೆ ಆಡಳಿತ ಮಂಡಳಿ ಮುಂದಿದ್ದು, ಡಿಸೆಂಬರ್ 4 ರಂದು ನಡೆಯುವ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com