ಹಾಸನ: 1865 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ನಿತಿನ್ ಗಡ್ಕರಿ ಚಾಲನೆ

ನಿಗದಿತ ಅವಧಿಯಲ್ಲಿ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ನಿತಿನ್ ಗಡ್ಕರಿ ಅವರಿಂದ ಚಾಲನೆ
ನಿತಿನ್ ಗಡ್ಕರಿ ಅವರಿಂದ ಚಾಲನೆ
Updated on

ಹಾಸನ: ನಿಗದಿತ ಅವಧಿಯಲ್ಲಿ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ   ನಿತಿನ್ ಗಡ್ಕರಿ ಹೇಳಿದ್ದಾರೆ.

 ಹಾಸನದಲ್ಲಿ 1.865 ಕೋಟಿ ವೆಚ್ಚದ ಹೆದ್ದಾರಿ ಕಾಮಗಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ದೇಶದ ವಿವಿಧ ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 2 ಲಕ್ಷ ಕೋಟಿ ರೂಪಾಯಿ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ಇದಲ್ಲದೇ, ಪ್ರತಿದಿನಕ್ಕೆ 28. ಕಿಮೀ ಹೆದ್ದಾರಿ ನಿರ್ಮಾಣ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ಇದು ಮುಂದಿನ ಆರು ತಿಂಗಳಲ್ಲಿ  ದಿನಕ್ಕೆ 40 ಕಿ. ಮೀಗೆ ತಲುಪುವ ಸಾಧ್ಯತೆ ಇದೆ ಎಂದು ಹೇಳಿದರು.

ತೈಲ ದರ ಹೆಚ್ಚಳ ಹಿನ್ನೆಲೆಯಲ್ಲಿ ಜೈವಿಕ ಇಂಧನ  ಬಳಕೆಯನ್ನು ಪ್ರೋತ್ಸಾಹಿಸಬೇಕಾದ ಅಗತ್ಯತೆ ಹೆಚ್ಚಾಗಿದೆ. ಜೈವಿಕ ಇಂಧನ ಬಳಕೆಯಿಂದ  ಕರ್ನಾಟಕ ಕೃಷಿಗೆ ಸಂಬಂಧಿಸಿದ ಬಹಳಷ್ಟು ಸಮಸ್ಯೆಗಳನ್ನು ನಿವಾರಿಸಬಹುದಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com