ರಾಜ್ಯ

ಕರ್ನಾಟಕ: ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

ಕರ್ನಾಟಕ: ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ
ಸಂಗ್ರಹ ಚಿತ್ರ
Published On :
ಬಾಗಲಕೋಟೆ: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಇಲಾಖೆ ನೀಡಿದ್ದ 303 ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಸತಿ ನಿಲಯದಲ್ಲಿಯೇ ಶನಿವಾರ ಬೆಳಗಿನ ಜಾವ ನಡೆದಿದೆ. 
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಟ್ಟಲಕೋಡ ಗ್ರಾಮದ ಮಂಜುನಾಥ ಹರಿಜನ (28) ಆತ್ಮಹತ್ಯೆ ಮಾಡಿಕೊಂಡ ಪೇದೆ. 
ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಭದ್ರತಾ ಸಿಬ್ಬಂದಿಯಾಗಿ ಮಂಜುನಾಥ ಕಳೆದ 1 ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. 2012ನೇ ಬ್ಯಾಚ್'ನಲ್ಲಿ ಡಿಎಆರ್ (ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್) ಆಗಿ ದಾವಣಗೆರೆಯಲ್ಲಿ ನೇಮಕವಾಗಿದ್ದ ಮಂಜುನಾಥ, ವರ್ಷದ ಹಿಂದೆ ಬಾಗಲಕೋಟೆಗೆ ವರ್ಗಾವಣೆಯಾಗಿದ್ದರು.
ಎಂದಿನಂತೆ ಮಂಜುನಾಥ್ ಅವರು ಶನಿವಾರ ಕರ್ತವ್ಯಕ್ಕೆ ಹಾಜರಾಗಿದ್ದರು. ರಾತ್ರಿ 2ರಿಂದ ಬೆಳಗಿನ ಜಾವ 6 ಗಂಟೆಯವರೆಗಿನ ಕರ್ತವ್ಯಕ್ಕೆ ಹಾಜರಾಗಿದ್ದರು. ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಒಬ್ಬರೇ ಇದ್ದ ಮಂಜುನಾಥ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಘಟನೆ ಇಡೀ ಪೊಲೀಸ್ ಇಲಾಖೆಗೆ ಆಶ್ಚರ್ಯವನ್ನುಂಟು ಮಾಡಿದೆ. ಘಟನೆ ಬಳಿಕ ವಿಧಿವಿಜ್ಞಾನ ಪ್ರಯೋಗಾಲಯದ ತಂಡವನ್ನು ಬೆಳಗಾವಿಗೆ ಕಳುಹಿಸಲಾಗಿದೆ. ಘಟನೆ ಬಳಿಕ ಬಾಂಬ್ ನಿಷ್ಕ್ರಿಯ ಹಾಗೂ ಶ್ವಾನದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. 
ಮೂರು ಸುತ್ತಿನ ಗುಂಡು ಹಾರಿರುವುದಾಗಿ ಅಧಿಕಾರಿಗಳು ತಿಳಿಸಿದ್ದು ಮಂಜುನಾಥ್ ಅವರ ಕುತ್ತಿಗೆ ಹಾಗೂ ತಲೆಗೆ ಗುಂಡುಗಳು ಹೊಕ್ಕಿವೆ ಎಂದು ತಿಳಿಸಿದ್ದಾರೆ. 
ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಪೇದೆಯೇ ಗುಂಡು ಹಾರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ಬೆಳವಣಿಗೆಗಳು ಕಂಡು ಬಂದಿಲ್ಲ ಎಂದಿದ್ದಾರೆ. 
ಆದರೆ, ಕುಟುಂಬಸ್ಥರು ಮಾತ್ರ ಅನುಮಾನ ವ್ಯಕ್ತಪಡಿಸಿದ್ದು, ಕೊಲೆ ಎಂದು ಶಂಕಿಸಿದ್ದಾರೆ. ಕುಟುಂಬಸ್ಥರ ದೂರಿನ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೇದೆಯ ಆತ್ಮೀಯ ಸ್ನೇಹಿತರು, ಸಹೋದ್ಯೋಗಿಗಳು, ಸಂಬಂಧಿಕರರನ್ನು ವಿಚಾರಣೆಗೊಳಪಡಿಸಿದ್ದಾರೆ. ಆತ್ಮಹತ್ಯೆಗೆ ಶರಣಾಗುವುದಕ್ಕೂ ಮುನ್ನ ಮಂಜುನಾಥ್ ಅವರು ಪೋಷಕರೊಂದಿಗೆ ಜಗಳ ಮಾಡಿಕೊಂಡಿದ್ದು, ಈ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.