ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿ ಬಂಧನ

ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಟೀ ಮಾರಾಟಗಾರನನ್ನು ಪೊಲೀಸರು ಬಂಧಿಸಿದ್ದಾರೆ,
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಟೀ ಮಾರಾಟಗಾರನನ್ನು ಪೊಲೀಸರು ಬಂಧಿಸಿದ್ದಾರೆ,
ಗುರುವಾರ ರಾತ್ರಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದು, ಆ  ಬಾಲಕಿಯನ್ನು ಮಕ್ಕಳ ಸಹಾಯವಾಣಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ವಿಚಾರಣೆ ನಡೆಸಿದಾಗ ಆಕೆ ಟೀ ಮಾರಾಟಗಾರ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾಗಿ ಹೇಳಿಕೆ ಕೊಟ್ಟಿದ್ದಳು,
ಧಾರವಾಡ ಮೂಲದ ಬಾಲಕಿಯನ್ನು ಆಕೆಯ ಸಂಬಂಧಿಕರು ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಬಿಟ್ಟು ಹೋಗಿದ್ದರು, ಆಕೆಗೆ ಊಟ ಹಾಗೂ ಹಣ ಕೊಡುವುದಾಗಿ ಹೇಳಿದ ಆರೋಪಿ ಖಾಲಿ ಇದ್ದ ರೈಲ್ವೆ ಬೋಗಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾಗಿ ಬಾಲಕಿ ಅಧಿಕಾರಿಗಳ ಬಳಿ ಹೋಳಿಕೆ ನೀಡಿದ್ದಾಳೆ. 
ಆರೋಪಿ ಮೆಹಬೂಬ್ ನನ್ನು ಪೊಲೀಸರು ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.,ಮೆಹಬೂಬ್ ವಿರುದ್ದ ಅತ್ಯಾಚಾರ ಕೇಸ್ ದಾಖಲಾಗಿದೆ. ಬಾಲಕಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com