ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆ ಜಾರಿಗೆ ತರಲಿ: ಕೃಷಿ ಸಚಿವ ಶಿವಶಂಕರ ರೆಡ್ಡಿ ಒತ್ತಾಯ

ಸ್ವಾಮಿನಾಥನ್ ವರದಿ ಪ್ರಕಾರ ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ....
ಕೃಷಿ ಸಚಿವ ಎನ್ ಎಚ್ ಶಿವಶಂಕರ ರೆಡ್ಡಿ
ಕೃಷಿ ಸಚಿವ ಎನ್ ಎಚ್ ಶಿವಶಂಕರ ರೆಡ್ಡಿ

ಚಿಕ್ಕಬಳ್ಳಾಪುರ: ಸ್ವಾಮಿನಾಥನ್ ವರದಿ ಪ್ರಕಾರ ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀತಿಯನ್ನು ರೂಪಿಸುವ ಅಗತ್ಯವಿದ್ದು, ಈ ಬಗ್ಗೆ ಪರಿಶೀಲಿಸುವ ಅಗತ್ಯವಿದೆ ಎಂದು ಕೃಷಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಒತ್ತಾಯಿಸಿದ್ದಾರೆ.

ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಸಮಸ್ಯೆಗಳನ್ನು ಅರಿತು ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದೆ. ಅಲ್ಲದೆ, ಕೃಷಿ ಕ್ಷೇತ್ರವನ್ನು ಸುಧಾರಿಸಲು ಹಾಗೂ ಗಮನಾರ್ಹ ಬದಲಾವಣೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ಹಲವು ಬದಲಾವಣೆಗಳನ್ನು ತರಬೇಕು ಎಂಬ ಒತ್ತಾಯ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸ್ವಾಮಿನಾಥನ್ ವರದಿ ಆಧಾರದಲ್ಲಿ ಕನಿಷ್ಠ ಬೆಂಬಲ ಯೋಜನೆಯನ್ನು ಜಾರಿ ಮಾಡಲು ಮರು ಪರಿಶೀಲಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಮಳೆಯ ಕೊರತೆ, ಅಂತರ್ಜಲ ಕುಸಿತ ಇರುವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ರೈತರ ಆತ್ಮಹತ್ಯೆ ಸಂಖ್ಯೆ ಕಡಿಮೆಯಿದೆ. ಈ ಜಿಲ್ಲೆಗಳ ರೈತರು ಹಲವು ಸಂಕಷ್ಟಗಳ ಮಧ್ಯೆ ಆತ್ಮವಿಶ್ವಾಸದಿಂದ ಮಾದರಿಯಾಗಿ ಬದುಕುತ್ತಿರುವುದು ಸಂತಸದ ವಿಚಾರ ಎಂದರು.

ಕೆಲವೊಮ್ಮೆ ಮಾಧ್ಯಮಗಳಲ್ಲಿ ಕೆಲವರ ಸ್ವಾಭಾವಿಕ ಸಾವುಗಳನ್ನೂ ರೈತರ ಆತ್ಮಹತ್ಯೆ ಎಂದು ಬಿಂಬಿಸಿ ಮತ್ತು ಅವುಗಳನ್ನು ವೈಭವೀಕರಿಸಿ ಸಮಾಜಕ್ಕೆ ತಪ್ಪು ಸಂದೇಶ ಮೂಡಿಸುವ ಜೊತೆಗೆ ಗೊಂದಲಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ ಅದು ಸರಿಯಲ್ಲ, ಮಾಧ್ಯಮಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com