ಬೆಳಗಾವಿಯಲ್ಲಿ ಭೀಕರ ಅಪಘಾತ: ಅಂತ್ಯಕ್ರಿಯೆ ಮುಗಿಸಿ ತೆರಳುವಾಗ 6 ಸಾವು, 8 ಮಂದಿಗೆ ಗಾಯ

ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಾಸಾಗುವ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿ 8 ಮಂದಿ ಗಾಯಗೊಂಡಿರುವ ಘಟನೆ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಳಗಾವಿ: ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಾಸಾಗುವ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿ 8 ಮಂದಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದ ಬಳಿ ನಡೆದಿದೆ. 
ಮಂಗಳವಾರ ಬೆಳಗ್ಗಿನ ಜಾವ 3ಗಂಟೆಗೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಬೊಲೇರೋ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೊಲೇರೋದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  8ಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. 
ಸವದತ್ತಿ ತಾಲೂಕಿನ ಮಾಡಮಗೇರಿ ಹಾಗೂ ಯರಜರವಿ ಗ್ರಾಮದ ನಿವಾಸಿಗಳಾದ ಗಂಗವ್ವ ಹುರಳಿ (30) ಕಾಶವ್ವ ಖಂಡ್ರಿ (70), ಯಲ್ಲವ್ವ ಪೂಜಾರಿ (45) ಯಲ್ಲವ್ವ ಗುಂಡಪ್ಪನವರ (40) ಹಾಗೂ ರೇಣುಕಾ ಸೊಪಾಡ್ಲ (35) ಮಲ್ಲವ್ವ ಖಂಡ್ರಿ ನೀಲವ್ವಾ(40), ಅನುಸೂಯಾ ನಾಯ್ಕರ(38) ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳು.
ಗೋಕಾಕ್ ಫಾಲ್ಸ್ ನಲ್ಲಿದ್ದ ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ತೆರಳುವಾಗ ಈ ಘಟನೆ ನಡೆದಿದ್ದು, ಸದ್ಯ ಈ ಬಗ್ಗೆ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com