ಉಡುಪಿ: 21 ಮುಗ್ಧ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ, ವಿಕೃತ ಕೃತ್ಯವೆಸಗಿದ ಪತ್ರಕರ್ತ ಬಂಧನ

ಬಾಲಕರ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿಯವರನ್ನು ಸೋಮವಾರ ಬಂಧನಕ್ಕೊಳಪಡಿಸಲಾಗಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಉಡುಪಿ: ಬಾಲಕರ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿಯವರನ್ನು ಸೋಮವಾರ ಬಂಧನಕ್ಕೊಳಪಡಿಸಲಾಗಿದೆ. 
ಕಳೆದ 6 ವರ್ಷಗಳಿಂದ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಪತ್ರಕರ್ತನ ಸೋಗಿನಲ್ಲಿ ಮಕ್ಕಳನ್ನು ವಿವಿಧೆಡೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂಬ ಅಧಿಕಾರಿಗಳು ತಿಳಿಸಿದ್ದಾರೆ. 
ಬಂಧನಕ್ಕೊಳಗಾಗಿರುವ ಪತ್ರಕರ್ತ ಕಳೆದ 10ವರ್ಷಗಳಿಂದಲೂ ವಿವಿಧ ದಿನಪತ್ರಿಕೆಗಳ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದಾನೆ. ಈತನಿಗೆ ವಿವಾಹವಾಗಿದ್ದು, ಪುತ್ರಿ ಕೂಡ ಇದ್ದಾಳೆ. 

ಈತನ ವಿರುದ್ಧ ಬೈಂದೂರು ಠಾಣೆಯಲ್ಲಿ 16, ಗಂಗೊಳ್ಳಿಯಲ್ಲಿ 3, ಕೊಲ್ಲೂರು ಮತ್ತು ಕುಂದಾಪುರ ಗ್ರಾಮದಲ್ಲಿ ತಲಾ 1 ಪ್ರಕರಣಗಳ ಸಹಿದ ಒಟ್ಟು 21 ಪ್ರಕರಣಗಳು ದಾಖಲಾಗಿವೆ. 

ಈತನಿಂದ ದೌರ್ಜನ್ಯಕ್ಕೊಳಗಾಗಿದ್ದ ಬಾಲಕನೊಬ್ಬ ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಪೋಶಕರು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬಳಿಕ ಬಾಲಕ ತನ್ನ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ್ದ. ಬಳಿಕ ಬಾಲಕನ ಮನೆಯವರು ಎಸ್'ಪಿಗೆ ಮಾಹಿತಿ ನೀಡಿದ್ದಾರೆ. 

ಇದರಂತೆ ಡಿವೈಎಸ್'ಪಿ ದಿನೇಶ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಿ, ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿತ್ತು. ನ.29 ರಂದು ಆರೋಪಿಯನ್ನು ಬಂಧಿಸಿದ್ದ ಅಧಿಕಾರಿಗಳು ಜಿಲ್ಲಾ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರ ಮನವಿ ಹಿನ್ನಲೆಯಲ್ಲಿ ಡಿ.3 ರವರೆಗೆ ಪೊಲೀಸ್ ಕಸ್ಟಡಿ ನೀಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com