ಬೆಂಗಳೂರು: ಐಐಎಸ್ ಸಿಯಲ್ಲಿ ಸಿಲಿಂಡರ್ ಸ್ಫೋಟ, ಯುವ ವಿಜ್ಞಾನಿ ಸಾವು

ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ ಸಿ)ಯ ಪ್ರಯೋಗಾಲದಲ್ಲಿ ಸಿಲಿಂಡರ್ ಸ್ಫೋಟಗೊಂಡು ಯುವ ವಿಜ್ಞಾನಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ.
ಸಾಂದರ್ಭಿಕ  ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ ಸಿ)ಯ ಪ್ರಯೋಗಾಲದಲ್ಲಿ ಸಿಲಿಂಡರ್ ಸ್ಫೋಟಗೊಂಡು ಯುವ ವಿಜ್ಞಾನಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ.
ಮೃತ ಸಂಶೋಧನಾ ವಿದ್ಯಾರ್ಥಿ ಏರೋಸ್ಪೇಸ್‌ ವಿಭಾಗದ ಮನೋಜ್ ಕುಮಾರ್ ಎಂದು ಗುರುತಿಸಲಾಗಿದ್ದು, ಹೈಡ್ರೋಜನ್ ಗ್ಯಾಸ್​ ಸಿಲಿಂಡರ್​ ಸ್ಫೋಟದಿಂದಾಗಿ ಸಾವಿಗೀಡಾಗಿದ್ದಾರೆ.
ಸ್ಫೋಟದಲ್ಲಿ ಕಾರ್ತಿಕ್, ನರೇಶ್, ಅತುಲ್ಯಾ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಖಾಸಾಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಥಳಕ್ಕೆ ಸದಾಶಿವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com