ಬಿಬಿಎಂಪಿ ಪಕ್ಷೇತರ ಸದಸ್ಯ ಏಳುಮಲೈ ನಿಧನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಗಾಯಪುರಂ ವಾರ್ಡಿನ ಪಕ್ಷೇತರ ಸದಸ್ಯ ಏಳುಮಲೈ ಅವರು ತೀವ್ರ ಅನಾರೋಗ್ಯದಿಂದ ವಿಕ್ರಂ ಆಸ್ಪತ್ರೆಯಲ್ಲಿ ...
ಏಳುಮಲೈ
ಏಳುಮಲೈ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಗಾಯಪುರಂ ವಾರ್ಡಿನ ಪಕ್ಷೇತರ ಸದಸ್ಯ ಏಳುಮಲೈ ಅವರು ತೀವ್ರ ಅನಾರೋಗ್ಯದಿಂದ ವಿಕ್ರಂ ಆಸ್ಪತ್ರೆಯಲ್ಲಿ ಗುರುವಾರ ನಸುಕಿನ ಜಾವ 1.30ರ ವೇಳೆಗೆ ವಿಧಿವಶರಾಗಿದ್ದಾರೆ.
ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೋಮಾವಸ್ಥೆ ತಲುಪಿದ್ದರು. ಮೂಗಿನಲ್ಲಿ ಗುಳ್ಳೆ ಆಗಿದೆಯೆಂದು ಸಂತೋಷ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಅವರಿಗೆ ತಪ್ಪು ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ವೇಳೆ ನೀಡಿದ ಅನಸ್ತೇಷಿಯಾದಿಂದ ಸಮಸ್ಯೆಯಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.
ಒಂದು ವಾರದ ಹಿಂದೆ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋಮಾ ಸ್ಥಿತಿಯಲ್ಲಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಏಳುಮಲೈ ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com