ಧನಂಜಯ್ ಕುಮಾರ್,
ರಾಜ್ಯ
ಬಹು ಅಂಗಾಂಗ ವೈಫಲ್ಯ: ಕೋಮಾ ಸ್ಥಿತಿಯಲ್ಲಿ ಮಾಜಿ ಸಚಿವ ವಿ.ಧನಂಜಯ ಕುಮಾರ್
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ವಿ.ಧನಂಜಯ್ ಕುಮಾರ್ ಕಳೆದ ನಾಲ್ಕು ತಿಂಗಳಿಂದ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ....
ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ವಿ.ಧನಂಜಯ್ ಕುಮಾರ್ ಕಳೆದ ನಾಲ್ಕು ತಿಂಗಳಿಂದ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಕೆಲ ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವಿ. ಧನಂಜಯ ಕುಮಾರ್ ಅವರನ್ನು ಕೆಲ ತಿಂಗಳುಗಳಿಂದ ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಇತ್ತೀಚೆಗೆ ಆರೋಗ್ಯ ತೀರಾ ಬಿಗಡಾಯಿಸಿದ ಕಾರಣ ಮಾಜಿ ಸಚಿವರು ಕೋಮ ಸ್ಥಿತಿಯಲ್ಲಿದ್ದು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. 67 ವರ್ಷದ ಧನಂಜಯ ಕುಮಾರ್ ಈಗ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು ಗುರುತು ಹಿಡಿಯಲಾರದಷ್ಟು ಸಣ್ಣಗಾಗಿದ್ದಾರೆ ಎಂದೂ ಮೂಲಗಳು ತಿಳಿಸಿವೆ.
ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವರಾಗಿದ್ದ ವಿ.ಧನಂಜಯ ಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗ. ಬಿಜೆಪಿಯಲ್ಲಿ ರಾಜಕೀಯ ಜೀವನ ಆರಂಭಿಸಿದ ಧನಂಜಯ್ ಕುಮಾರ್, ಶಾಸಕರಾಗಿ, ಸಂಸದರಾಗಿ, ಆಯ್ಕೆಯಾಗಿದ್ದರು, ಕೇಂದ್ರ ಸರ್ಕಾರದಲ್ಲೂ ಸಚಿವರಾಗಿಯೂ ಕೆಲಸ ಮಾಡಿದ್ದರು.
ಈಗ ಕಳೆದ ನಾಲ್ಕು ತಿಂಗಳಿಂದಲೂ ಧನಂಜಯ ಕುಮಾರ್ ಕೋಮಾ ಸ್ಥಿತಿಯಲ್ಲಿದ್ದಾರೆ. ಮಂಗಳೂರಿನ ಆಸ್ಪತ್ರೆ ಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ..
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ