ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಸಿದ್ದಗಂಗಾ ಮಠದ ಕಿರಿಯ ಶ್ರೀಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಶ್ರೀಗಳ ಆರೋಗ್ಯದ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ. ಇದಲ್ಲದೆ ಚೆನ್ನೈನ ಆಸ್ಪತ್ರೆಯ ವೈದ್ಯರೊಂದಿಗೂ ನಾನು ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದು, ಶ್ರೀಗಳು ಶೀಘ್ರವೇ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.