ತುಮಕೂರು: ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಮೂವರು ಯುವಕರ ದುರ್ಮರಣ

ತಿಪಟೂರಿನ ಬನ್ಸಾಲಿ ಡಾಬ ಬಳಿ ತಡರಾತ್ರಿ ಅಪರಿಚಿತ ವಾಹನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ತುಮಕೂರು: ತಿಪಟೂರಿನ ಬನ್ಸಾಲಿ ಡಾಬ ಬಳಿ ತಡರಾತ್ರಿ ಅಪರಿಚಿತ ವಾಹನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು  ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಿರೀಶ್ (23), ಯೋಗಿಶ್ (25), ಪ್ರವೀಣ್ (24) ಮೃತರು. ಮತ್ತೋರ್ವ ಯುವಕನಿಗೆ ಗಂಭೀರ ಗಾಯವಾಗಿದ್ದು ತಿಪಟೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರು ಭದ್ರಾವತಿ ಮೂಲದವರು ಎನ್ನಲಾಗಿದೆ. 
ತಿಪಟೂರಿನ ಬನ್ಸಾಲಿ ಡಾಬ ಎದುರು ಅಪರಿಚಿತ ವಾಹನ ಸ್ವಿಪ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ತಿಪಟೂರು ಪಿಎಸ್​ಐ ಕಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com