ಹಣ ನೀಡಲಿಲ್ಲವೆಂದು ಹೆತ್ತ ತಾಯಿಗೆ ಬೆಂಕಿ ಹಚ್ಚಿದ ಪಾಪಿ ಮಗ!

ನೀಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಗೆ ಪೆಟ್ರೋಲ್ ಸುರಿದ ಮಗನೊಬ್ಬ ಬೆಂಕಿ ಹಚ್ಚಿರುವ ಘಟನೆ ಸದಾಶಿವನಗರದಲ್ಲಿ ನಡೆದಿದೆ...
ಆರೋಪಿ ಉತ್ತಮ್ ಕುಮಾರ್
ಆರೋಪಿ ಉತ್ತಮ್ ಕುಮಾರ್
Updated on: 
ಬೆಂಗಳೂರು: ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಗೆ ಪೆಟ್ರೋಲ್ ಸುರಿದ ಮಗನೊಬ್ಬ ಬೆಂಕಿ ಹಚ್ಚಿರುವ ಘಟನೆ ಸದಾಶಿವನಗರದಲ್ಲಿ ನಡೆದಿದೆ. 
ಉತ್ತಮ್ ಕುಮಾರ್ (20) ತಾಯಿಗೆ ಬೆಂಕಿ ಹಚ್ಚಿದ ಮಗನೆಂದು ಹೇಳಲಾಗುತ್ತಿದೆ. ಡಿ.6 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 
ಹಣ ವಿಚಾರ ಸಂಬಂಧ ತಾಯಿ ಹಾಗೂ ಮಗನ ನಡುವೆ ಮಾತಿನ ಚಕಮಕಿ ನಡೆದಿದೆ. ಮಗನು ಮದ್ಯ ಸೇವನೆಗೆ ಹಣ ವ್ಯಯಿಸುತ್ತಾನೆಂದು ತಿಳಿದ ತಾಯಿ ಹಣ ನೀಡಲು ನಿರಾಕರಿಸಿದ್ದಾರೆ. ಇದರಿಂದ ತೀವ್ರವಾಗಿ ಕೆಂಡಾಮಂಡಗೊಂಡಿರುವ ಆರೋಪಿ ಉತ್ತಮ್ ಕುಮಾರ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. 
ಕೂಡಲೇ ಮಹಿಳೆಯ ಪತಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬೆಂಕಿ ಹಚ್ಚಿದ ಪರಿಣಾಮ ಮಹಿಳೆಯ ಮುಖ, ಕೈ,ಕಾಲು ಹಾಗೂ ಎದೆ ಭಾಗ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com