ತುಮಕೂರು: ಯಕೃತ್ತು ಮತ್ತು ಪಿತ್ತನಾಳದ ಸಮಸ್ಯೆಯಿಂದಾಗಿ ಚೆನ್ನೈನ ರೆಲಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡು ಬಂದಿದ್ದು, ಮಂಗಳವಾರ ಸಂಜೆ ಅಥವಾ ಬುಧವಾರ ಬೆಳಿಗ್ಗೆ ಐಸಿಯುವಿನಿಂದ ವಾರ್ಡ್'ಗೆ ಶಿಫ್ಟ್ ಮಾಡುವ ಸಾಧ್ಯತೆಗಳಿವೆ ಎಂದು ವರದಿಗಳಿಂದ ತಿಳಿದುಬಂದಿದೆ.