ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಮತ್ತಷ್ಟು ಅನುದಾನ ನೀಡುವಂತೆ ಆಗ್ರಹ

ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದನ್ನು ವಿಧಾನಮಂಡಲ ಅಧಿವೇಶನದಲ್ಲಿ ಹಾಜರಿದ್ದ ಹಲವು ಸದಸ್ಯರು ಪ್ರಶ್ನೆ ಮಾಡಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಳಗಾವಿ: ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದನ್ನು ವಿಧಾನಮಂಡಲ ಅಧಿವೇಶನದಲ್ಲಿ ಹಾಜರಿದ್ದ ಹಲವು ಸದಸ್ಯರು ಪ್ರಶ್ನೆ ಮಾಡಿದ್ದಾರೆ. 
ನಿನ್ನೆ ನಡೆದ ಚಳಿಗಾಲ ಅಧಿವೇಶನದಲ್ಲಿ ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕಾಂಗ್ರೆಸ್ ನಾಯಕರಾದ ಕೆ.ಸಿ. ಕೊಂಡಯ್ಯ ಹಾಗೂ ಶರಣಪ್ಪ ಮತ್ತೂರ್ ಅವರು ಆಗ್ರಹಿಸಿದರು. 
ಸದನದಲ್ಲಿ ಮಾತನಾಡಿದ ಕೊಂಡ್ಡ ಹಾಗೂ ಮತ್ತೂರ್ ಅವರು, ರೂ.6,012 ಕೋಟಿ ಬಿಡುಗಡೆ ಮಾಡಬೇಕಿದ್ದ ಸರ್ಕಾರದ 2013-14 ಮತ್ತು 2018-19ನೇ ಸಾಲಿನಲ್ಲಿ ರೂ.2,928 ಕೋಟಿ ಬಿಡುಗಡೆ ಮಾಡಿದೆ. ಸರ್ಕಾರ ಇನ್ನೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ರೂ.1,500 ಕೋಟಿ ಬಿಡುಗಡೆ ಮಾಡಬೇಕಿದೆ ಎಂದು ಹೇಳಿದ್ದಾರೆ. 
ಅಲ್ಲದೆ, ಕರ್ನಾಟಕ ಸ್ಥಳೀಯ ಅಭಿವೃದ್ಧಿ ಮಂಡಳಿಯಲ್ಲಿ ಖಾಲಿಯಿರುವ 37 ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಸರ್ಕಾರಕ್ಕೆ ಇದೇ ವೇಳೆ ಆಗ್ರಹಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com