ಹೈದರಾಬಾದ್ ಕರ್ನಾಟಕ ಅನುದಾನ ರೂ.1000 ಕೋಟಿ ಹೆಚ್ಚಳ: ಸಿಎಂ ಕುಮಾರಸ್ವಾಮಿ

ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾವನ್ನು ಪ್ರಸ್ತುತವಿರುವ ಒಂದೂವರೆ ಸಾವಿರ ಕೋಟಿ ಗಳಿಂದ ಎರಡು ಸಾವಿರ ಕೋಟಿಗಳಿಗೆ ಹೆಚ್ಚಿಸಬೇಕು ಎದು ಆ ಭಾಗದ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು...
ಮುಖ್ಯಮಂತ್ರಿ ಕುಮಾರಸ್ವಾಮಿ
ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಳಗಾವಿ: ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾವನ್ನು ಪ್ರಸ್ತುತವಿರುವ ಒಂದೂವರೆ ಸಾವಿರ ಕೋಟಿ ಗಳಿಂದ ಎರಡು ಸಾವಿರ ಕೋಟಿಗಳಿಗೆ ಹೆಚ್ಚಿಸಬೇಕು ಎದು ಆ ಭಾಗದ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರೂ. 2 ಸಾವಿರ ಕೋಟಿಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ನಿನ್ನೆ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಹೈದರಬಾದ್ ಕರ್ನಾಟಕ ಭಾಗದ ಶಾಸಕರೊಂದಿಗೆ ಆ ಭಾಗದ ಸಮಸ್ಯೆಗಳ ಬಗ್ಗೆ ಸಮಾಲೋಚನೆ ಸಭೆ ನಡೆಸಿ ಮಾತನಾಡಿದರು. 
ಕುಮಾರಸ್ವಾಮಿ ಪ್ರಸ್ತುತ ಬಜೆಟ್'ನಲ್ಲಿ ರೂ.1500 ಕೋಟಿ ಅನುದಾನ ನಿಗದಿಪಡಿಸಲಾಗಿದೆ. ಆದರೆ, ಒಂದು ಸಾವಿರ ರುಪಾಯಿ ಕಾಮಗಾರಿಗಳ ಕ್ರಿಯಾ ಯೋಜನ ಸಿದ್ಧಪಡಿಸಿ ಅನುದಾನ ಬಿಡುಗಡ ಮಾಡಲಾಗಿದೆ. ಈ ಅನುದಾನವನ್ನು ಮುಂದಿನ ಬಜೆಟ್'ನಲ್ಲಿ ರೂ.2 ಸಾವಿರ ಕೋಟಿ ಗಳಿಗೆ ಹೆಚ್ಚಿಸಬೇಕು ಎಂದು ಸಾಸಕರು ಮುಖ್ಯಮಂತ್ರಿಗಳ ಬಳಿ ಒತ್ತಾಯಿಸಿದ್ದರು. 
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿಯವರು, ರೂ. 2 ಸಾವಿರ ಕೋಟಿಗಳಿಗೆ ಕ್ರಿಯಾ ಯೋಜನಯನ್ನು ಸಿದ್ದಪಡಿಸಿ ಸಲ್ಲಿಸಿ, ಪ್ರಸ್ತುತ ಸಾಲಿನಲ್ಲಿ ಇದೂವರೆಗೆ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ರೂ.692 ಕೋಟಿ ವೆಚ್ಚ ಮಾಡಲಾಗಿದೆ.  ಮುಂದಿನ ತಿಂಗಳ ಅವಧಿಯಲ್ಲಿ ಕಾಮಗಾರಿಯಲ್ಲಿ ತ್ವರಿತವಾಗಿ ಮುಗಿಸಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಿದಂತ ಉಳಿದ ಅನುದಾನವನ್ನು ಬಿಡುಗಡೆ ಮಾಡಲು ಸಿದ್ಧ ಎಂದು ಉತ್ತರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com