ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ವಿಷಾಹಾರ ಸೇವನೆಯಿಂದ ಹಲವರು ಮೃತಪಟ್ಟಿರುವ ಸುದ್ದಿ ಆಘಾತವನ್ನುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದುರಂತದಲ್ಲಿ ಮೃತರಾದವರ ಕುಟುಂಬದವರಿಗೆ ಪರಿಹಾರ, ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸಚಿವರು ಹಾಗೂ ಶಾಸಕರಿಗೆ ಸೂಚಿಸಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ವಿಷಾಹಾರ ಸೇವನೆಯಿಂದ ಹಲವರು ಮೃತಪಟ್ಟಿರುವ ಸುದ್ದಿ ಆಘಾತವನ್ನುಂಟು ಮಾಡಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಪುಟ್ಟರಂಗ ಶೆಟ್ಟಿ, ಹನೂರು ಕ್ಷೇತ್ರದ ಶಾಸಕರಾದ ನರೇಂದ್ರ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ.