

ಬೆಳಗಾವಿ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ 10 ಭಕ್ತರು ಮೃತಪಟ್ಟಿರುವ ಪ್ರಕರಣ ದುರದೃಷ್ಟಕರ ಘಟನೆಯಾಗಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಪ್ರಧಾನ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆ ಆಯುಕ್ತರು ಮಂಡ್ಯ ಹಾಗೂ ಮೈಸೂರು ಜಿಲ್ಲಾ ಆರೋಗ್ಯ ಅಧೀಕ್ಷಕರಿಗೆ ಸೂಚನೆ ನೀಡಿದ್ದಾರೆ ಎಂದು ಅವರು ತಿಳಿಸಿದರು.