ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾನುವಾರ ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಲಿಂಗರಾಜು ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿರುವ ಅವರು, ಕರ್ನಾಟಕ ಮೀನು ಖರೀದಿಗೆ ನಿಷೇಧ ಹೇರಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತಂದಿದೆ. ಈ ಸಂಬಂದ ಗೋವಾ ಸರ್ಕಾರ ಮತ್ತು ಗೋವಾ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲಿಯೇ ಪ್ರಧಾನಮಂತ್ರಿಗಳನ್ನು ಬೇಟಿ ಮಾಡಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.