ಸಂಗ್ರಹ ಚಿತ್ರ
ರಾಜ್ಯ
ವಿಷ ಪ್ರಸಾದ ದುರಂತ: ಜೆಎಸ್ಎಸ್ ಆಸ್ಪತ್ರೆಯಲ್ಲಿ ಮಹಿಳೆ ಸಾವು, ಸಾವಿನ ಸಂಖ್ಯೆ 14ಕ್ಕೆ ಏರಿಕೆ
ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಇಂದು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಚಾಮರಾಜನಗರ: ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಇಂದು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ವಾಡಿ ಮಾರಮ್ಮ ದೇವಿಯ ವಿಷ ಪ್ರಸಾದಕ್ಕೆ ಬಲಿಯಾದವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇಂದು ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದೇಗುಲದ ಆವರಣದಲ್ಲಿ ಪ್ರಸಾದ ತಿಂದು ತೀವ್ರ ಅಸ್ವಸ್ಥರಾಗಿದ್ದ ಮೈಲಿಬಾಯಿ ಎಂಬ ಮಹಿಳೆಯನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಮೈಲಿಬಾಯಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಮೈಲಿಬಾಯಿ ತಮ್ಮ ಪತಿ ಕೃಷ್ಣನಾಯಕ ಜತೆ ದೇವಸ್ಥಾನಕ್ಕೆ ತೆರಳಿ ಪ್ರಸಾದ ಸೇವಿಸಿದ್ದರು. ಆದರೆ ಪ್ರಸಾದ ಸೇವಿಸಿದ ದಿನವೇ ಪತಿ ಕೃಷ್ಣನಾಯಕ ಮೃತ ಪಟ್ಟಿದ್ದರು. ಮೈಲಿಬಾಯಿ ಅವರನ್ನು ಜೆಎಸ್ಎಸ್ ಆಸ್ಪತ್ರಗೆ ದಾಖಲು ಮಾಡಲಾಗಿತ್ತು. ಗಂಭೀರವಾಗಿದ್ದ ಮೈಲಿ ಬಾಯಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆ ಮೂಲಕ ಸುಳ್ವಾಣಿ ಮಾರಮ್ಮ ದೇಗುಲದ ವಿಷ ಪ್ರಸಾದ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ