ರೂ.255 ಕೋಟಿ ವೆಚ್ಚದಲ್ಲಿ 18 ಟೆಂಡರ್ ಶ್ಯೂರ್ ರಸ್ತೆ

ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರೂ.255 ಕೋಟಿ ವೆಚ್ಚದಲ್ಲಿ 18 ರಸ್ತೆಗಳನ್ನು ಟೆಂಡರ್ ಶ್ಯೂರ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಬಿಬಿಎಂಪಿ ಕರೆಯಲಾಗಿದ್ದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೊಂದು ತಿಂಗಳುಗಳ ಒಳಗಾಗಿ ಕಾಮಗಾರಿ ಆರಂಭಗೊಳ್ಳಲಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರೂ.255 ಕೋಟಿ ವೆಚ್ಚದಲ್ಲಿ 18 ರಸ್ತೆಗಳನ್ನು ಟೆಂಡರ್ ಶ್ಯೂರ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಬಿಬಿಎಂಪಿ ಕರೆಯಲಾಗಿದ್ದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೊಂದು ತಿಂಗಳುಗಳ ಒಳಗಾಗಿ ಕಾಮಗಾರಿ ಆರಂಭಗೊಳ್ಳಲಿದೆ. 
ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಗಾಂಧಿನಗರ, ಶಿವಾಜಿನಗರ, ಮಲ್ಲೇಶ್ವರ ಮತ್ತು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 16 ವಾರ್ಡ್ ಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
ಮೊದಲ ಭಾಗವಾಗಿ 18 ರಸ್ತೆಗಳನ್ನು ಟೆಂಡರ್ ಶ್ಯೂರ್ ಯೋಜನೆ ಅಡಿಯಲ್ಲಿ ಅಭಿವೃದ್ಧಿಪಡಿಸಲು ಡಿಪಿಆರ್ ಸಿದ್ಧಪಡಿಸಲಾಗಿದೆ. ಅದರಂದೆ 18 ರಸ್ತೆಗಳನ್ನು ಟೆಂಡರ್ ಶ್ಯೂರ್ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲು ರೂ.255 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. 
ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಹೆಚ್ಚುವರಿಯಾಗಿ 20 ರಸ್ತೆಗಳನ್ನು ತರಲು ನಿರ್ಧರಿಸಲಾಗಿದೆ. ಈಗಾಗಲೇ 30 ರಸ್ತೆಗಳು ಅಭಿವೃದ್ಧಿಗೊಳ್ಳುತ್ತಿದ್ದು, ಇದರಲ್ಲಿ 12 ರಸ್ತೆಗಳ ವೈಟ್ ಟಾಪಿಂಗ್ ನಡೆಯುತ್ತಿದೆ. ಪಟ್ಟಿಗೆ ಇದೀಗ ಮತ್ತೆ 18 ರಸ್ತೆಗಳನ್ನು ಸೇರ್ಪಡೆಗೊಳಿಸಲಾಗಿದೆ. ಎಂದು ಬಿಬಿಎಂಪಿ ಅಧಿಕಾರಿ ಬಸವರಾಜ್ ಆರ್ ಕಬಡೆಯವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com