ಡಿ.20ರೊಳಗೆ ಬೊಮ್ಮನಹಳ್ಳಿ ವಲಯ ಗುಂಡಿ ಮುಕ್ತಗೊಳಿಸಿ: ಬಿಬಿಎಂಪಿಗೆ 'ಹೈ' ಸೂಚನೆ

ನಗರದ ಬೊಮ್ಮನಹಳ್ಳಿ ವಲಯವನ್ನು ಡಿ.20ರೊಳಗೆ ಸಂಪೂರ್ಣ ರಸ್ತೆ ಗುಂಡಿ ಮುಕ್ತ ಮಾಡಬೇಕು ಎಂದು ಹೈಕೋರ್ಟ್ ಬಿಬಿಎಂಪಿಗೆ ಸೋಮವಾರ ಗಡುವು ನೀಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ನಗರದ ಬೊಮ್ಮನಹಳ್ಳಿ ವಲಯವನ್ನು ಡಿ.20ರೊಳಗೆ ಸಂಪೂರ್ಣ ರಸ್ತೆ ಗುಂಡಿ ಮುಕ್ತ ಮಾಡಬೇಕು ಎಂದು ಹೈಕೋರ್ಟ್ ಬಿಬಿಎಂಪಿಗೆ ಸೋಮವಾರ ಗಡುವು ನೀಡಿದೆ. 
ನಗರದಲ್ಲಿ ರಸ್ತೆ ಗುಂಡಿ ಸಮಸ್ಯೆ ಕುರಿತು ಸಲ್ಲಿಕೆಯಾಗಿದ್ದ ಪ್ರತ್ಯೇಕ ನಾಲ್ಕು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಎಸ್.ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ. 
ಅಲ್ಲದೆ, ಮಹದೇವಪುರ ಹಾಗೂ ಬೊಮ್ಮನಹಳ್ಳಿ ವಲ್ಲಯದ ರಸ್ತೆ ಗುಂಡಿ ಭರ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಆ ವಲಯಗಳ ಮುಖ್ಯ ಇಂಜಿನಿಯರ್ ಗಳು ಪರಿಶೀಲಿಸಿ ಸಹಿ ಮಾಡಿದ ಮೇಜರ್ ಮೆಂಟ್ ಬುಕ್ ಅನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನಿರ್ದೇಶಿಸಿತು. ಇದಕ್ಕೂ ಮೊದಲು ಅರ್ಜಿ ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ಮಹದೇವಪುರ ವಲಯದ ರಸ್ತೆ ಗುಂಡಿ ಭರ್ತಿ ಕಾರ್ಯಪ್ರಗತಿ ವರದಿಯನ್ನು ನ್ಯಾಯಪೀಠಕ್ಕೆ ಒದಗಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com