ಬಾಗಲಕೋಟೆ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 40 ಮಕ್ಕಳು ಅಸ್ವಸ್ಥ

ಹಲ್ಲಿ ಬಿದ್ದ ಬಿಯೂಟ ಸೇವಿಸಿ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಗುರುವಾರ ಹುನಗುಂದ ತಾಲೂಕಿನ ಚಿಕ್ಕಮಾಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು
Updated on: 
ಬಾಗಲಕೋಟೆ: ಹಲ್ಲಿ ಬಿದ್ದ ಬಿಯೂಟ ಸೇವಿಸಿ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಗುರುವಾರ ಹುನಗುಂದ ತಾಲೂಕಿನ ಚಿಕ್ಕಮಾಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳು ಬಿಸಿಯೂಟ ಸೇವಿಸುತ್ತಿದ್ದ ವೇಳೆ ಬಾಲಕನೊಬ್ಬನ ತಟ್ಟೆಯಲ್ಲಿ ಸತ್ತ ಹಲ್ಲಿ ಬಿದ್ದಿರುವುದು ಕಂಡುಬಂದಿದೆ. ಊಟ ಮಾಡಿದ ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದು, ಕೂಡಲೇ ಅಸ್ವಸ್ಥ ಮಕ್ಕಳನ್ನು ಕಮತಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಅಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಶಾಲೆಯಲ್ಲಿ 1ರಿಂದ 8ನೇ ತರಗತಿವರೆಗೆ ವ್ಯಾಸಂಗ ಮಾಡುವ 150 ಮಕ್ಕಳಿದ್ದು, ಹಸಿವಾಗಿದ್ದ 8ರಿಂದ 10 ಮಕ್ಕಳು ಮೊದಲೇ ಊಟ ಮಾಡಿದ್ದಾರೆ. ಈ ವೇಳೆ ಹನುಮಂತ ಚಲವಾದಿ ಎಂಬ 6ನೇ ತರಗತಿ ವಿದ್ಯಾರ್ಥಿ ತಟ್ಟೆಯ ಸಾಂಬಾರಿನಲ್ಲಿ ಹಲ್ಲಿ ಕಾಣಿಸಿಕೊಂಡಿದೆ. ಇದನ್ನು ಆ ವಿದ್ಯಾರ್ಥಿ ಶಿಕ್ಷಕರಿಗೆ ಹೇಳಲು ಹೆದರಿಕೊಂಡಿದ್ದಾನೆ. ಆದರೆ ಆತನ ಜತೆಗಿದ್ದ ಸ್ನೇಹಿತರು ಶಿಕ್ಷಕರಿಗೆ ವಿಚಾರ ತಿಳಿಸಿದ್ದು, ಊಟದ ಮಾಡಿದ ಮಕ್ಖಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಕ್ಕಳಿಗೆ ಯಾವುದೇ ಅಪಾಯ ಇಲ್ಲ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮಕ್ಕಳಿಗೂ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕ ಗುರುನಾಥ್ ಅಯ್ಯಪ್ಪ ಗೌಡರ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com