ಕ್ರಿಸ್'ಮಸ್ ಸಂಭ್ರಮ: ಕೆಎಸ್ಆರ್'ಟಿಸಿಯಿಂದ 550 ಹೆಚ್ಚುವರಿ ಬಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್'ಟಿಸಿ) ಕ್ರಿಸ್ ಮಸ್ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರಯಾಣದ ಅನುಕೂಲಕ್ಕಾಗಿ ಡಿ.21 ಮತ್ತು 22 ರಂದು ಬೆಂಗಳೂರು ನಗರದಿಂದ ರಾಜ್ಯ ಮತ್ತು ಹೊರರಾಜ್ಯಗಳ ವಿವಿಧೆಡೆಗೆ 550 ಹೆಚ್ಚುವರಿ ಬಸ್ ಕಾರ್ಯಾಚರಣೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್'ಟಿಸಿ) ಕ್ರಿಸ್ ಮಸ್ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರಯಾಣದ ಅನುಕೂಲಕ್ಕಾಗಿ ಡಿ.21 ಮತ್ತು 22 ರಂದು ಬೆಂಗಳೂರು ನಗರದಿಂದ ರಾಜ್ಯ ಮತ್ತು ಹೊರರಾಜ್ಯಗಳ ವಿವಿಧೆಡೆಗೆ 550 ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದೆ. 
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ. ಬೀದರ್, ತಿರುಪತಿ ಮೊದಲಾದ ಸ್ಥಳಗಳಿಗೆ ಮತ್ತು ಮೈಸೂರು ರಸ್ತೆಯ ಸ್ಯಾಟ್'ಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾ ಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹೆಚ್ಚುವರಿ ಬಸ್ ಗಳು ಹೊರಡಲಿವೆ. 
ಶಾಂತಿನಗರದ ಕೆಎಸ್ಆರ್'ಟಿಸಿ ಕೇಂದ್ರ ಘಟಕ 2 ಮತ್ತು 4 ಮುಂಭಾಗದಿಂದ ಮಧುರೈ, ಕುಂಭಕೋಣಂ. ತಿರುಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮೊದಲಾದ ನಗರಗಳಿಗೆ ಬಸ್ ಕಾರ್ಯಾಚರಣೆ ಮಾಡಲಾಗುವುದು. ಅಂತೆಯೇ ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ, ಜಯನಗರ, ಜನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮೊದಲಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಾಗುವುದು. 
ನಂತರ ರಾಜ್ಯ ಹಾಗೂ ಹೊರರಾಜ್ಯಗಳ ವಿವಿಧೆಡೆಯಿಂದ ನಗರಕ್ಕೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಡಿ.25ರಂದು ಹೆಚ್ಚುವರಿ ಬಸ್ ಕಾರ್ಯಾಚರಣೆಗೊಳಿಸಲಾಗುವುದು. ಸಾರ್ವಜನಿಕರು ಈ ಹೆಚ್ಚುವರಿ ಬಸ್ ಸೌಲಭ್ಯ ಪಡೆದುಕೊಳ್ಳುವಂತೆ ಕೆಎಸ್ಆರ್'ಟಿಸಿ ಮನವಿ ಮಾಡಿಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com