ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ನಾಡಧ್ವಜವಿರುವ ಟಿ-ಶರ್ಟ್ ಖರೀದಿಗೆ ವಿದ್ಯಾರ್ಥಿಗಳ ಮೇಲೆ ಒತ್ತಡ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸಮ್ಮೇಳನಕ್ಕೆ ಆಗನಿಸುತ್ತಿರುವ ಶಾಲೆಗಳ ವಿದ್ಯಾರ್ಥಿಗಳು ನಾಡಧ್ವಜ ಇರುವ ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಧಾರವಾಡ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸಮ್ಮೇಳನಕ್ಕೆ ಆಗನಿಸುತ್ತಿರುವ ಶಾಲೆಗಳ ವಿದ್ಯಾರ್ಥಿಗಳು ನಾಡಧ್ವಜ ಇರುವ ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. 
ಸಮ್ಮೇಳನದಲ್ಲಿ ಒಟ್ಟು 18 ಶಾಲೆಗಳ ವಿದ್ಯಾರ್ಥಿಗಳಿಗೆ ಆಹ್ವಾನ ನೀಡಲಾಗಿದ್ದು, ಈ ವಿದ್ಯಾರ್ಥಿಗಳಿಗೆ ನಾಡಧ್ವಜ ಇರುವ ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ತಿಳಿದುಬಂದಿದೆ. 
ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿರುವುದರಿಂದ ಇದು ಪೋಷಕರಿಗೆ ತಲೆನೋವಾಗಿ ಪರಿಣಮಿಸಿದೆ. ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿರುವುದರಿಂದ ಯಾವುದೇ ದಾರಿಯಿಲ್ಲದೆ ಒಲ್ಲದ ಮನಸ್ಸಿನಿಂದ ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ. 
ಶಾಲಾ ಆಡಳಿತ ಮಂಡಳಿ ಒಂದೊಂದು ಟಿ-ಶರ್ಟ್ಸ್'ಗೆ ರೂ.200 ಪಡೆಯುತ್ತಿದೆ. ಪ್ರತೀ ವರ್ಷ ಒಂದಲ್ಲ ಒಂದು ವಿಚಾರವನ್ನು ಹಿಡಿದುಕೊಂಡು ವಿದ್ಯಾರ್ಥಿಗಳ ಬಳಿ ಹಣವನ್ನು ವಸೂಲಿ ಮಾಡುತ್ತಲೇ ಇರುತ್ತದೆ. ಸರ್ಕಾರವೇ ಟೀ-ಶರ್ಟ್ಸ್ ಗಳನ್ನು ವಿತರಿಸಿದರೆ ಉತ್ತಮವಾಗಿರುತ್ತದೆ ಎಂದು ಪೋಷಕರು ಹೇಳಿದ್ದಾರೆ. 
ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿ ಪ್ರತಿಕ್ರಿಯೆ ನೀಡಿದ್ದು, 18 ಶಾಲೆಗಳು ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುವಂತೆ ತಿಳಿಸಿರುವುದು ನಿಜ. ಆದರೆ, ಇದನ್ನು ನಾವು ಕಡ್ಡಾಯ ಮಾಡಿಲ್ಲ. ಈ ಬಗ್ಗೆ ಶೀಘ್ರದಲ್ಲಿಯೇ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com