ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಸಾಹಿತಿಗಳ ವಿರೋಧ

ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಮುಂದಾಗಿರುವ ರಾಜ್ಯ ಸರ್ಕಾರದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಮುಂದಾಗಿರುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಸಾಹಿತಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ಗೋಕಾಕ್ ಮಾದರಿಯ ಚಳವಳಿ ಆರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು  ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲಾಗುವುದು ಎಂದು ಹೇಳಿದ ಬೆನ್ನಲ್ಲೇ ಕನ್ನಡ ಸಾಹಿತಿ ಪರಿಷತ್ ನಲ್ಲಿ ಸಾಹಿತಿಗಳು ಸಭೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ.
ಪ್ರಾಥಮಿಕ ಹಂತದಲ್ಲೇ ಆಂಗ್ಲ ಮಾಧ್ಯಮ ಪರಿಚಯಿಸುತ್ತಿರುವುದಕ್ಕೆ ನಮ್ಮ ವಿರೋಧ ಇದೆ. ಈ ಸಂಬಂಧ ಮುಂದಿನ ಮೂರು ಅಥವಾ ನಾಲ್ಕು ದಿನಗಳಲ್ಲಿ ನನ್ನ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರು ಹೇಳಿದ್ದಾರೆ.
ರಾಜ್ಯದ ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ ಒಂದನೇ ತರಗತಿಯಿಂದ ಪ್ರತ್ಯೇಕವಾಗಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com